ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ತಿರುವು ಪಡೆಯುತ್ತಿರುವ ಬೆನ್ನಲ್ಲೇ, ಡಿ.ಕೆ. ಸುರೇಶ್ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ಹೊಸ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ.
ಖ್ಯಾತ ಪತ್ರಕರ್ತ ನಾಡೋಜ ಪಾಟೀಲ ಪುಟ್ಟಪ್ಪ ಅವರ ಸಾಲುಗಳನ್ನು ಉಲ್ಲೇಖಿಸಿರುವ ಅವರು, “ಗುರಿಯನ್ನು ಬೇಗ ತಲುಪಬೇಕು ಅನ್ನುವವರು ದಾರಿಯಲ್ಲಿ ವಿಶ್ರಮಿಸುತ್ತಾ ಕುಳಿತುಕೊಳ್ಳಬಾರದು” ಎಂಬ ಮಾರ್ಮಿಕ ಸಂದೇಶವನ್ನು ಹಂಚಿಕೊಂಡಿದ್ದಾರೆ.
ಈ ಪೋಸ್ಟ್ ಪ್ರಕಟವಾದ ಕ್ಷಣದಿಂದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣಗಳ ನಡುವೆ ಅಧಿಕಾರಕ್ಕಾಗಿ ಹಗ್ಗಜಗ್ಗಾಟ ನಡೆಯುತ್ತಿರುವ ಈ ಹೊತ್ತಿನಲ್ಲಿ, ಈ ಸಾಲುಗಳು ಯಾರನ್ನು ಉದ್ದೇಶಿಸಿವೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿವೆ.
ಇದು ತಮ್ಮ ಸಹೋದರ ಡಿ.ಕೆ. ಶಿವಕುಮಾರ್ ಅವರಿಗೆ “ವಿಶ್ರಾಂತಿ ಬೇಡ, ಅಧಿಕಾರದ ಗುರಿ ತಲುಪುವವರೆಗೆ ಹೋರಾಟ ಮುಂದುವರಿಸಿ” ಎಂಬ ಉತ್ತೇಜನವೇ? ಅಥವಾ ಪ್ರಸ್ತುತ ಅಧಿಕಾರದಲ್ಲಿರುವ ನಾಯಕರಿಗೆ ನೀಡಿದ ಪರೋಕ್ಷ ಎಚ್ಚರಿಕೆಯೇ?
ಒಟ್ಟಿನಲ್ಲಿ, ನೇರ ಮಾತುಗಳಿಗಿಂತ ಪರೋಕ್ಷ ಸಂದೇಶಗಳ ಮೂಲಕ ಡಿ.ಕೆ. ಸುರೇಶ್ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವುದಂತೂ ನಿಜ.

