ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ವರ್ಷ ಕ್ರಿಸ್‌ಮಸ್ ಹಾಗೂ ಹೊಸವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಆತಂಕ ಹೆಚ್ಚಾಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕ್ರಿಸ್‌ಮಸ್, ಹೊಸವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ ಎಂದಿದ್ದಾರೆ.
ಈ ಹಿಂದೆ ಕೊರೋನಾ ಬಂದಾಗ ಯಾವೆಲ್ಲಾ ತಪ್ಪುಗಳನ್ನು ಮಾಡಿದ್ದೆವೋ ಅವು ಮತ್ತೆ ಮರುಕಳಿಸಬಾರದು. ಆಕ್ಸಿಜನ್, ಬೆಡ್, ತುರ್ತು ಚಿಕಿತ್ಸೆ ಎಲ್ಲದರ ಬಗ್ಗೆ ಗಮನಹರಿಸಬೇಕು. ಜನಸಂದಣಿ ಇರುವ ಕಡೆ ಮಾಸ್ಕ್ ಧರಿಸಿ. ಇದು ನಿಮ್ಮ ಆರೋಗ್ಯಕ್ಕೇ ಒಳ್ಳೆಯದು. ಇನ್ನು 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ.
ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದು ಹೇಳುವ ಸಂದರ್ಭ ಬಂದಿಲ್ಲ, ಆ ಸಂದರ್ಭ ಬಾರದಂತೆ ಎಲ್ಲರೂ ಎಚ್ಚರವಹಿಸಿ ಎಂದಿದ್ದಾರೆ.