ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರ ಪ್ರದೇಶದ ಮದರಸಾಗಳಲ್ಲಿ ಓದುತ್ತಿರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ.
ಇಲ್ಲಿಯವರೆಗೆ 1 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 1000 ರೂ., 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‌ಗಳ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು.
ಕಳೆದ ವರ್ಷ ಸುಮಾರು 5 ಲಕ್ಷ ಮಕ್ಕಳು ಸ್ಕಾಲರ್‌ಶಿಪ್ ಪಡೆದುಕೊಂಡಿದ್ದು, ಇದರಲ್ಲಿ ಸುಮಾರು 16,558 ವಿದ್ಯಾರ್ಥಿಗಳು ಮದರಸಾಗಳಲ್ಲಿ ಶಿಕ್ಷಣ ಪಡೆಯುವವರೇ ಆಗಿದ್ದರು.
ಕೇಂದ್ರ ಸರ್ಕಾರದ ಪ್ರಕಾರ, ಶಿಕ್ಷಣ ಹಕ್ಕು ಕಾಯ್ದೆಯಡಿ 1 ರಿಂದ 8 ನೇ ತರಗತಿವರೆಗೆ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ. ಈ ಮದರಸಾಗಳಲ್ಲಿ ಮಧ್ಯಾಹ್ನದ ಊಟ ಮತ್ತು ಪುಸ್ತಕಗಳೂ ಉಚಿತ. ಇದರೊಂದಿಗೆ ವಿದ್ಯಾರ್ಥಿಗಳಿಗೆ ಇತರ ಅಗತ್ಯ ವಸ್ತುಗಳನ್ನು ಸಹ ನೀಡಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ. ಆದ್ದರಿಂದ, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನವನ್ನು ನೀಡಲಾಗುವುದು ಮತ್ತು ಅವರ ಅರ್ಜಿಗಳನ್ನು ರವಾನಿಸಬೇಕು ಎಂಬ ನಿಯಮ ಮಾಡಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ