Tuesday, June 28, 2022

Latest Posts

ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಬಗ್ಗೆ ಐಸಿಎಂ ಆರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊರೋನಾ ಲಸಿಕೆಯ ಎರಡು ಡೋಸ್ ಪಡೆದ ಬಳಿಕ ಹೆಚ್ಚಿನ ರಕ್ಷಣೆಗೆ ಬೂಸ್ಟರ್ ಡೋಸ್ ಹಾಕಿಸಿಕೊಳ್ಳಬೇಕು ಅನ್ನುವುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಭಾರ್ಗವ ಹೇಳಿದ್ದಾರೆ.
ಈ ಬಗ್ಗೆ ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಭಾರತ ತನ್ನ ಜನರಿಗೆ ಮಾತ್ರವಲ್ಲದೆ, ಜಗತ್ತಿನ ಎಲ್ಲರಿಗೂ ಲಸಿಕೆಯ ಎರಡೂ ಡೋಸ್ ಸಿಗುವಂತೆ ನೋಡಿಕೊಳ್ಳುತ್ತಿದೆ. ವಯಸ್ಕರರಿಗೆ ಅಗತ್ಯವಿರುವ 2 ಡೋಸ್ ಲಸಿಕೆ ನೀಡುವುದು ಸರ್ಕಾರದ ಗುರಿಯಾಗಿದೆ ಎಂದರು.
ನವೆಂಬರ್ ನ ಕೊನೆಯ ವಾರದಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಕುರಿತು ಹಾಗೂ ಇತರೆ ಪ್ರಮುಖ ಅಂಶಗಳನ್ನು ಕೇಂದ್ರದ ಉನ್ನತ ತಜ್ಞರ ಜತೆ ಚರ್ಚೆ ನಡೆಸಲಾಗುತ್ತದೆ.
ಈಗಾಗಲೇ ಹಲವು ರಾಜ್ಯಗಳು ಬೂಸ್ಟರ್ ಡೋಸ್ ಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿರುವ ಬಗ್ಗೆ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರು, ಈ ವಿಚಾರಗಳ ಬಗ್ಗೆ ಕೇಂದ್ರ ಸರ್ಕಾರ ನೇರವಾಗಿ ನಿರ್ಧಾರ ಮಾಡಲು ಸಾಧ್ಯವಿಲ್ಲ. ಬೂಸ್ಟರ್ ಡೋಸ್ ನೀಡಿಕೆ ಬಗ್ಗೆ ಐಸಿಎಂ ಆರ್ ನಿರ್ದೇಶಿಸಿದರೆ ಮಾತ್ರ ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss