ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋವಿಡ್ -19 ಪ್ರಕರಣಗಳ ಹೆಚ್ಚಳದ ನಡುವೆ ಸದ್ಯಕ್ಕೆ ಎರಡನೇ ಕೋವಿಡ್ -19 ಬೂಸ್ಟರ್ ಡೋಸ್ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ. “ಮೊದಲು ನಾವು ದೇಶದಲ್ಲಿ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಾಗಿದೆ” ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 134 ಹೊಸ ಪ್ರಕರಣಗಳು ದಾಖಲಾಗಿದ್ದು, ಭಾರತದ ಸಕ್ರಿಯ ಪ್ರಕರಣಗಳು ಪ್ರಸ್ತುತ 2,582 ರಷ್ಟಿದೆ.
ಸಚಿವಾಲಯದ ಮಾಹಿತಿಯ ಪ್ರಕಾರ, ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ ಒಟ್ಟು 220.11 ಕೋಟಿ ಲಸಿಕೆ ಡೋಸ್‌ಗಳನ್ನು (95.13 ಕೋಟಿ ಎರಡನೇ ಡೋಸ್ ಮತ್ತು 22.41 ಕೋಟಿ ಮುನ್ನೆಚ್ಚರಿಕೆ ಡೋಸ್) ನೀಡಲಾಗಿದೆ.