ದೇಶದಲ್ಲಿ ರಸಗೊಬ್ಬರ ಕೊರತೆಯಿಲ್ಲ, ಯೂರಿಯಾ ಉತ್ಪಾದನೆಯಲ್ಲಿ ಭಾರತ ಸ್ವಾಲಂಬಿಯಾಗಲಿದೆ: ಮನ್‌ ಸುಖ್‌ ಮಾಂಡವೀಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
“ಭಾರತದಲ್ಲಿ ರಸಗೊಬ್ಬರ ಕೊರತೆ ಯಿಲ್ಲ, ಶೀಘ್ರವೇ ಭಾರತವು ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲಿದೆ” ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು “ದೇಶದಲ್ಲಿ ವಾರ್ಷಿಕವಾಗಿ ಸುಮಾರು 3.25-3.50 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬಳಕೆಯನ್ನು ಅಂದಾಜಿಸಲಾಗಿದೆ ಮತ್ತು ಮುಂಗಾರಿನ ಋತುವಿನಲ್ಲಿ, ಅಂದಾಜು 1.80 ಲಕ್ಷ ಮೆಟ್ರಿಕ್ ಟನ್ ಯೂರಿಯಾದ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದೆ, ಮುಂಗಾರು ಬೆಳೆಯ ಸಂದರ್ಭದಲ್ಲಿ 1.50 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಉತ್ಪಾದನೆಯಾಗಲಿದೆ. ಉಳಿದ 30 ಲಕ್ಷ ಮೆಟ್ರಿಕ್ ಟನ್ ಯೂರಿಯಾವನ್ನು ಈಗಾಗಲೇ ವಿವಿಧ ದೇಶಗಳಿಂದ ವ್ಯವಸ್ಥೆ ಮಾಡಲಾಗಿದೆ. ಅಭೂತಪೂರ್ವ ಜಾಗತಿಕ ರಸಗೊಬ್ಬರಗಳ ಕೊರತೆಯ ಹೊರತಾಗಿಯೂ ಭಾರತದಲ್ಲಿ ಯೂರಿಯಾ, ಡಿಎಪಿ ಮತ್ತು ಇತರ ರಸಗೊಬ್ಬರಗಳ ಕೊರತೆಯಿಲ್ಲ, ರೈತರು ಚಿಂತಿಸಬೇಕಾದ ಅವಶ್ಯಕತೆಯಿಲ್ಲ” ಎಂದಿದ್ದಾರೆ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!