ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ನಗರದ ರಸ್ತೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಡುವ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಕೂಡಲೇ ಕೂಡಲೇ ಪ್ರಿನ್ಸೆಸ್ ರಸ್ತೆ ನಾಮಫಲಕ ಅಳವಡಿಸುವಂತೆ ಆಗ್ರಹಿಸಿದ್ದಾರೆ.
ಮೈಸೂರು ನಗರ ಪಾಲಿಕೆ ವತಿಯಿಂದ ಪ್ರಿನ್ಸೆಸ್ ರೋಡ್ ನಾಮಫಲಕ ಅಳವಡಿಸಿ ಗೊಂದಲವನ್ನು ನಿವಾರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ಪ್ರಸ್ತಾವನೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿರುವ ಅವರು, ಹಲವು ದಾಖಲೆಗಳನ್ನೂ ನೀಡಿದ್ದಾರೆ. ಜತೆಗೆ ರೈಲ್ವೆ ಇಲಾಖೆಯಲ್ಲಿ ಉಲ್ಲೇಖವಿರುವ ಬಗ್ಗೆಯೂ ದಾಖಲೆ ನೀಡಿದ್ದಾರೆ.