ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಮಳೆ ಸುರಿಯುತ್ತಿದ್ದು, ನಿನ್ನೆ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಾವಣಗೆರೆ, ಚಿತ್ರದುರ್ಗ, ತುಮಕೂರು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.