ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಿಂದ ದೆಹಲಿಯಿಂದ ಸ್ಪರ್ಧಿಸಿದರೆ ಆಶ್ಚರ್ಯವಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಪೈಗಂಬರ್ ಕುರಿತಾಗಿ ಖಾಸಗಿ ಸುದ್ದಿವಾಹಿನಿಯಲ್ಲಿ ನಡೆದ ಚರ್ಚೆಯ ವೇಳೆ ನೂಪುರ್ ಶರ್ಮ ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದರ ಬೆನ್ನಲ್ಲೇ ನೂಪುರ್ ಶರ್ಮ ಅವರನ್ನು ರಾಷ್ಟ್ರೀಯ ವಕ್ತಾರೆ ಸ್ಥಾನದಿಂದ ಅಮಾನತುಗೊಳಿಸಿತ್ತು.
ಆದ್ರೆ ಇದೀಗ ಅಸಾಸುದ್ದೀನ್ ಓವೈಸಿ, ಬಿಜೆಪಿಯು ನೂಪುರ್ ಶರ್ಮ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಂಡಿಲ. ಖಂಡಿತವಾಗಿ ಅವರು ರಾಜಕಾರಣಕ್ಕೆ ಮರಳುತ್ತಾರೆ. ಬಿಜೆಪಿ ಪರವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.