ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೆಂಬರ್ 23ರ ಉಪಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ನಾಯಕರ ಮಾತಿಗೆ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಅವರ ಪರ ಪ್ರಯೋಗ ನೋಡಿದ್ದೇನೆ. ನನ್ನ ಮೇಲೆ ಮತ್ತು ಬಿಜೆಪಿ ನಾಯಕರ ಮೇಲೆ ಆರೋಪ ಟೀಕೆ, ಟಿಪ್ಪಣಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರ ಎಲ್ಲಾ ಆರೋಪಗಳನ್ನು ನೋಟ್ ಮಾಡಿ ಇಟ್ಟುಕೊಂಡಿದ್ದೇನೆ. ನವೆಂಬರ್ 13 ರಂದು ಚುನಾವಣೆ ನಡೆಯುತ್ತದೆ. ನವೆಂಬರ್ 23ರಂದು ಫಲಿತಾಂಶ ಬರಲಿದೆ. ಚುನಾವಣೆ ಫಲಿತಾಂಶ ಬಂದ ಬಳಿಕ ಎಲ್ಲರಿಗೂ ನಾನು ಉತ್ತರ ಕೊಡುತ್ತೇನೆ ಎಂದು ಹರಿಹಾಯ್ದರು.
ಜಾತಿಗಣತಿಯನ್ನು ಈ ಸರ್ಕಾರ ಯಾಕೆ ಇನ್ನೂ ಬಿಡುಗಡೆ ಮಾಡಿಲ್ಲ? ನನ್ನ ಪ್ರಶ್ನೆಗೆ ಉತ್ತರ ಕೊಡಿ ಕಾಂತರಾಜು ವರದಿ ಅಂತ ಇದೇ ಸಿದ್ದರಾಮಯ್ಯ ಭಜನೆ ಮಾಡಿದ್ದರು. ಕುಮಾರಸ್ವಾಮಿ ವರದಿ ಸ್ವೀಕಾರ ಮಾಡಿಲ್ಲ ಅಂತ ಸಿದ್ದರಾಮಯ್ಯ ಆರೋಪ ಮಾಡಿದ್ದರು. ಇವರು ಅಧಿಕಾರಕ್ಕೆ ಬಂದು ಎಷ್ಟು ವರ್ಷ ಆಯ್ತು? ಒಂದೂವರೆ ವರ್ಷದ ಮೇಲೆ ಆಯಿತು. ಕಾಂತರಾಜು ವರದಿ ಇಟ್ಟುಕೊಂಡು ಏನು ದಿನ ಬೆಳಗುತ್ತಿದ್ದಾರಾ ಗಂಧದ ಕಡ್ಡಿ ಇಟ್ಟುಕೊಂಡು? ಜಾತಿಗಣತಿ ಬಿಡುಗಡೆ ಮಾಡಲು ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದರು.