ಹೊಸದಿಗಂತ ಡಿಜಿಟಲ್ ಡೆಸ್ಕ್;
ಭಯೋತ್ಪಾದನೆ ಕೊನೆಗೊಳ್ಳುವವರೆಗೆ ಪಾಕಿಸ್ತಾನದೊಂದಿಗೆ ಭಾರತ ಮಾತುಕತೆ ನಡೆಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಮಾತನಾಡಿದ ಅವರು, ಉಗ್ರ ಚಟುವಟಿಕೆಗಳ ವಿಚಾರವಾಗಿ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.ಮಾತುಕತೆ ಮತ್ತು ಬಾಂಬ್ ದಾಳಿಗಳು ಒಟ್ಟಿಗೆ ನಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನದೊಂದಿಗೆ ಮಾತುಕತೆ ಮತ್ತು ಗಡಿ ನಿಯಂತ್ರಣ ರೇಖೆಯಲ್ಲಿ ವಾಣಿಜ್ಯ ಚಟುವಟಿಕೆಯನ್ನು ಪುನರಾರಂಭಿಸಬೇಕು ಎಂದು ರಾಜಕೀಯ ಪಕ್ಷಗಳು ಒತ್ತಾಯಿಸುತ್ತಿರುವ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಶಾ, ಭಯೋತ್ಪಾದನೆ ಅಂತ್ಯವಾಗುವವರೆಗೆ ಪಾಕಿಸ್ತಾನದ ಜೊತೆ ಮಾತುಕತೆ ನಡೆಸುವ ಇಚ್ಛೆಯನ್ನು ನಾವು ಹೊಂದಿಲ್ಲ. ಆದರೆ, ಕಾಶ್ಮೀರದ ಯುವಕರೊಂದಿಗೆ ಖಂಡಿತಾ ಮಾತುಕತೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.