April 13, 2026
Monday, April 13, 2026
spot_img

ಇಂಡಿಯನ್ ತೈಲ ಟ್ಯಾಂಕರ್‌ಗಳಿಗೆ ಯಾವುದೇ ಸುಂಕ ಹಾಕಿಲ್ಲ: ಇರಾನ್ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾರ್ಮುಜ್ ಜಲಸಂಧಿ ಸುತ್ತ ಉದ್ವಿಗ್ನತೆ ಹೆಚ್ಚಾಗಿರುವ ನಡುವೆಯೇ, ಭಾರತೀಯ ತೈಲ ಟ್ಯಾಂಕರ್‌ಗಳಿಗೆ ಇರಾನ್ ಯಾವುದೇ ಟೋಲ್ ಅಥವಾ ಶುಲ್ಕ ವಿಧಿಸಿಲ್ಲ ಎಂದು ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಸ್ಪಷ್ಟಪಡಿಸಿದ್ದಾರೆ. ಈ ಹೇಳಿಕೆ ಭಾರತದಲ್ಲಿ ಇಂಧನ ಬೆಲೆ ಏರಿಕೆ ಬಗ್ಗೆ ಮೂಡಿದ್ದ ಆತಂಕಕ್ಕೆ ಕೆಲಮಟ್ಟಿನ ನೆಮ್ಮದಿ ನೀಡಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ರಾಯಭಾರಿ, ಭಾರತೀಯ ಹಡಗುಗಳಿಂದ ನಾವು ಯಾವುದೇ ಶುಲ್ಕ ವಸೂಲಿ ಮಾಡಿಲ್ಲ. ಇದನ್ನು ಭಾರತ ಸರ್ಕಾರದ ಮಟ್ಟದಲ್ಲಿಯೂ ಪರಿಶೀಲಿಸಬಹುದು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಇತ್ತೀಚೆಗೆ ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ 2 ಮಿಲಿಯನ್ ಡಾಲರ್‌ವರೆಗೆ ಟೋಲ್ ವಿಧಿಸಲಾಗುತ್ತಿದೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಈ ಹಿನ್ನೆಲೆಯಲ್ಲಿ ಅವರ ಸ್ಪಷ್ಟನೆ ಮಹತ್ವ ಪಡೆದಿದೆ.

ಇದನ್ನೂ ಓದಿ:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಹಣ ಪಾವತಿಸುವ ಹಡಗುಗಳನ್ನು ತಡೆಯುವ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದರಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲೂ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಜಗತ್ತಿನ ಒಟ್ಟು ತೈಲ ಸಾಗಣೆಯ ಸುಮಾರು 20 ಶೇಕಡಾ ಹಾರ್ಮುಜ್ ಜಲಸಂಧಿಯ ಮೂಲಕವೇ ನಡೆಯುತ್ತದೆ. ಭಾರತಕ್ಕೂ ಸುಮಾರು ಅರ್ಧದಷ್ಟು ಕಚ್ಚಾ ತೈಲ ಮತ್ತು ಎಲ್‌ಪಿಜಿ ಪೂರೈಕೆ ಇದೇ ಮಾರ್ಗದ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಯಾವುದೇ ಅಡಚಣೆ ಉಂಟಾದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !