ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸುವುದಿಲ್ಲ ಎಂದು ಸರ್ಕಾರದಿಂದ ಭರವಸೆ ನೀಡಿದೆ.
ಈ ಸಂಬಂಧ ವಿಧಾನಸಭೆಯಲ್ಲಿ ಎಲೆಕ್ಟ್ರಿಕ್, ವಾಣಿಜ್ಯ ಮತ್ತು ಹಳದಿ ಬೋರ್ಡ್ ವಾಹನಗಳ ಹೊರತುಪಡಿಸಿ ನೂತನ ವಾಹನಗಳಿಗೆ ತೆರಿಗೆ ವಿಧಿಸುವ ಕರ್ನಾಟಕ ಮೋಟಾರ್ ವಾಹನಗಳ ತೆರಿಗೆ ನಿರ್ಧಾರಣೆ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ.
ಪ್ರತಿಪಕ್ಷದ ಸದಸ್ಯರು ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸಬಾರದು, ಸಬ್ಸಿಡಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಕೂಡ ಇದನ್ನು ಬೆಂಬಲಿಸಿ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸಿದಂತೆ ಸಲಹೆ ನೀಡಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧೇಯಕ ಮಂಡಿಸಿದ್ದು, ತಿದ್ದುಪಡಿ ಮಾಡುವುದಾಗಿ ಭರವಸೆ ನೀಡಿದರು. ಬಳಿಕ ವಿಧೇಯಕ ಅಂಗೀಕಾರ ಪಡೆದುಕೊಂಡಿದೆ.