September 28, 2026
Monday, September 28, 2026
spot_img

ಎಲ್‌ಪಿಜಿ ಕೊರತೆ ಅಂತ ಟೆನ್ಶನ್ ಬೇಡ: 5 ಕೆಜಿ ಸಿಲಿಂಡರ್ ಪೂರೈಕೆ ಹೆಚ್ಚಿಸಿದ ಕೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ–ಇರಾನ್ ನಡುವಿನ ಯುದ್ಧ ಪರಿಸ್ಥಿತಿ ಜಾಗತಿಕ ಇಂಧನ ಸರಬರಾಜಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಜೋರಾಗಿರುವ ನಡುವೆಯೇ, ದೇಶದಲ್ಲಿ ಎಲ್‌ಪಿಜಿ ಕೊರತೆ ಉಂಟಾಗಬಹುದು ಎಂಬ ಆತಂಕವೂ ಜನರಲ್ಲಿ ಮೂಡಿತ್ತು. ಈ ಹಿನ್ನೆಲೆ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದ್ದು, ಭಾರತದಲ್ಲಿ ಎಲ್‌ಪಿಜಿ ಯಾವುದೇ ಕೊರತೆಯಿಲ್ಲದೆ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ತಿಳಿಸಿದೆ.

ಗೃಹ ಬಳಕೆಗೆ ಅಗತ್ಯವಿರುವ ಅನಿಲ ಪೂರೈಕೆ ಸಂಪೂರ್ಣ ಸುರಕ್ಷಿತವಾಗಿದ್ದು, ಜನರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಸರ್ಕಾರ ಮನವಿ ಮಾಡಿದೆ.

ಇದನ್ನೂ ಓದಿ:

ಗ್ರಾಹಕರ ತುರ್ತು ಅಗತ್ಯವನ್ನು ಗಮನದಲ್ಲಿಟ್ಟುಕೊಂಡು 5 ಕೆಜಿ ತೂಕದ ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯನ್ನು ದೇಶಾದ್ಯಂತ ಹೆಚ್ಚಿಸಲಾಗಿದೆ. ಕಳೆದ ಮಾರ್ಚ್ 23ರಿಂದ ಈಗಾಗಲೇ ಸುಮಾರು 6.6 ಲಕ್ಷ ಸಿಲಿಂಡರ್‌ಗಳು ಮಾರಾಟವಾಗಿರುವುದಾಗಿ ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ. ಈ ಸಿಲಿಂಡರ್‌ಗಳು ಎಲ್ಲಾ ಗ್ಯಾಸ್ ಏಜೆನ್ಸಿಗಳಲ್ಲೂ ಲಭ್ಯವಿದ್ದು, ಸೂಕ್ತ ದಾಖಲೆ ತೋರಿಸಿ ಖರೀದಿಸಬಹುದು ಎಂದು ಮಾಹಿತಿ ನೀಡಲಾಗಿದೆ.

ಸಣ್ಣ ಸಿಲಿಂಡರ್ ಖರೀದಿಸಲು ವಿಳಾಸದ ದಾಖಲೆ ಕಡ್ಡಾಯವಿಲ್ಲ. ಯಾವುದೇ ಒಂದು ಮಾನ್ಯ ಗುರುತಿನ ಚೀಟಿ ತೋರಿಸಿದರೆ ಸಾಕು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಜೊತೆಗೆ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಪೂರೈಕೆಯನ್ನೂ ನಿರಂತರವಾಗಿ ಕಾಯ್ದುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇಶದ ಸಂಸ್ಕರಣಾಗಾರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪೆಟ್ರೋಲ್ ಪಂಪ್‌ಗಳಲ್ಲೂ ಸಾಕಷ್ಟು ದಾಸ್ತಾನು ಇದೆ ಎಂದು ತಿಳಿಸಿದೆ.

Must Read