ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಕೇಸ್‌ಲ್ಲಿ ಎಸ್‌ಐಟಿ ತನಿಖೆ ಪೂರ್ಣ ಮಾಡಲು ಸಮಯ ನಿಗದಿ ಮಾಡಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು,ಎಸ್‌ಐಟಿ ಅವರಿಗೆ ಅವರದ್ದೇ ಆದ ತೀರ್ಮಾನ ಅದ್ರಂತೆ ತನಿಖೆ ನಡೆಯುತ್ತೆ .ಅದು ಪೂರ್ಣಗೊಳ್ಳುವವರೆಗೆ ಅವರು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ, ನಾವು ಮಧ್ಯಪ್ರವೇಶಿಸುವುದಿಲ್ಲ ಅಥವಾ ಅವರಿಗೆ ಯಾವುದೇ ಸೂಚನೆಗಳನ್ನು ನೀಡುವುದಿಲ್ಲ. ತನಿಖೆ ಶೀಘ್ರದಲ್ಲೇ ಪೂರ್ಣಗೊಂಡರೆ, ವರದಿಯನ್ನು ಶೀಘ್ರದಲ್ಲೇ ಸಲ್ಲಿಸಲಾಗುತ್ತದೆ. ಪ್ರಕರಣವು ತಾರ್ಕಿಕ ಅಂತ್ಯವನ್ನು ತಲುಪುವವರೆಗೆ ಅವರು ತನಿಖೆ ನಡೆಸುತ್ತಾರೆ ಎಂದರು.
ಎನ್‌ಐಎ ತನಿಖೆಗೆ ಕೊಡಿ ಎಂಬ ವಿಪಕ್ಷಗಳ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ತನಿಖೆಗೆ ಕೊಡಬೇಕಾದರೂ ಈಗ ಇಲ್ಲಿ ತನಿಖೆ ನಡೆಯುತ್ತಿದೆ. ತನಿಖೆ ನಡೆಯೋ ಬಗ್ಗೆ ಯಾರದ್ದು ತಕರಾರಿಲ್ಲ. ಎಸ್‌ಐಟಿ ತನಿಖೆ ಎಲ್ಲರೂ ಸ್ವಾಗತ ಮಾಡಿದ್ದಾರೆ.ತನಿಖೆ ನಡೆಯುತ್ತಿದೆ ಈ ಸಮಯದಲ್ಲಿ ಬೇರೆ ಏಜೆನ್ಸಿಯಿಂದ ತನಿಖೆ ಆಗತ್ಯವಿಲ್ಲ. ಹೀಗಾಗಿ ಸದ್ಯಕ್ಕೆ ಎನ್‌ಐಎ ತನಿಖೆಗೆ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.