ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೌದಿ ಅರೇಬಿಯಾ ಪ್ರವಾಸವನ್ನು ಅರ್ಧದಲ್ಲೇ ಕಡಿತಗೊಳಿಸಿ ಭಾರತಕ್ಕೆ ಮರಳಿದ ನರೇಂದ್ರ ಮೋದಿ ಇಂದು ಮುಂಜಾನೆ ದೆಹಲಿಗೆ ಆಗಮಿಸಿದ್ದಾರೆ. ಸ್ವಲ್ಪವೂ ಸಮಯ ವ್ಯರ್ಥ ಮಾಡದೇ ಏರ್‌ಪೋರ್ಟ್‌ನಲ್ಲಿ ಸಭೆ ನಡೆಸಿದ್ದಾರೆ.
ಬುಧವಾರ ಮುಂಜಾನೆ ಬಂದಿಳಿದ ಮೋದಿ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಅಧಿಕಾರಿಗಳೊಂದಿಗೆ ಸಂಕ್ಷಿಪ್ತ ಸಭೆ ನಡೆಸಿದರು.
ಪ್ರಧಾನಿ ಮೋದಿ ಅವರು ಸೌದಿ ಅರೇಬಿಯಾಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದರು. ಪೂರ್ವ ನಿಗದಿ ಕಾರ್ಯಕ್ರಮದ ಪ್ರಕಾರ ಇಂದು ರಾತ್ರಿ ಮೋದಿ ಮರಳಬೇಕಿತ್ತು. ಆದರೆ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಮಂಗಳವಾರ ರಾತ್ರಿಯೇ ಭಾರತದತ್ತ ಪ್ರಯಾಣ ಬೆಳೆಸಿದ್ದರು