ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ವಿಧಿಸುವ ಬದಲು ಮಾಸಿಕ ಮತ್ತು ವಾರ್ಷಿಕ ಪಾಸ್‌ಗಳನ್ನು ನೀಡಲು ಸರ್ಕಾರ ಚಿಂತಿಸುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಅವರು, ಖಾಸಗಿ ವಾಹನಗಳು ಒಟ್ಟು ಟೋಲ್ ಸಂಗ್ರಹದಲ್ಲಿ ಕೇವಲ ಶೇ. 26 ರಷ್ಟಿವೆ ಎಂದು ಹೇಳಿದ್ದಾರೆ.
ಗ್ರಾಮಸ್ಥರ ಓಡಾಟಕ್ಕೆ ಯಾವುದೇ ತೊಂದರೆಯಾಗದಂತೆ ಗ್ರಾಮಗಳ ಹೊರಗೆ ಟೋಲ್ ಬೂತ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
74% ಟೋಲ್ ಆದಾಯವು ವಾಣಿಜ್ಯ ವಾಹನಗಳಿಂದ ಬರುತ್ತದೆ. ವೈಯಕ್ತಿಕ ಸಾರಿಗೆಗಾಗಿ ಮಾಸಿಕ ಅಥವಾ ವಾರ್ಷಿಕ ಪಾಸ್‌ಗಳನ್ನು ಪರಿಚಯಿಸುವ ಬಗ್ಗೆ ನಾವು ಯೋಚಿಸುತ್ತಿದ್ದೇವೆ ಎಂದು ಸಚಿವರು ಹೇಳಿದರು.