ಅನುಮತಿ ಪಡೆಯದೆಅಧಿಕಾರಿಗಳ ವರ್ಗಾವಣೆ ಮಾಡಬಾರದು: ರಾಜ್ಯ ಸರಕಾರಕ್ಕೆ ಚುನಾವಣಾ ಆಯೋಗ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಇದರ ನಡುವೆ ರಾಜ್ಯ ಸರ್ಕಾರಕ್ಕೆ ಆಯೋಗ ಮಹತ್ವದ ಸೂಚನೆ ನೀಡಿದೆ.
ಅದೇನೆಂದರೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡಬಾರದು ಎಂದು ಖಡಕ್ ಎಚ್ಚರಿಕೆ ನೀಡಿದೆ.
ಈ ಸಂಬಂಧ ರಾಜ್ಯ ಚುನಾವಣಾಕಾರಿ ಮನೋಜ್ಕುಮಾರ್ ಮೀನಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಪತ್ರ ಬರೆದಿದ್ದು, ಒಂದು ವೇಳೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ವರ್ಗಾವಣೆಗೊಳಿಸಿದರೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕಾಗುತ್ತದೆ . ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡುವಾಗ ಮುಖ್ಯ ಚುನಾವಣಾಕಾರಿಯವರ ಸಹಮತಿ ಪಡೆಯಬೇಕೆಂದು ನಿರ್ದೇಶನ ನೀಡಿದ್ದರೂ ಇತ್ತೀಚೆಗೆ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಮನೋಜ್ಕುಮಾರ್ ಮೀನಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!