ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯೋ ಮಾತೇ ಇಲ್ಲ: ಪರಮೇಶ್ವರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ತಡವಾಗುತ್ತಿರಬಹುದು ಆದರೆ, ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳೂ ನಿಂತಿಲ್ಲ. ಗ್ಯಾರಂಟಿ ಯೋಜನೆಗಳುಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಬುಧವಾರ ಹೇಳಿದರು.

ಕೆಲವು ಗ್ಯಾರಂಟಿ ಯೋಜನೆಗಳನ್ನು ಕೈಬಿಟ್ಟು ಕ್ಷೇತ್ರದ ಅಭಿವೃದ್ಧಿಗೆ ಹಣ ಮಂಜೂರು ಮಾಡುವಂತೆ ಕಾಂಗ್ರೆಸ್ ಶಾಸಕ ಗವಿಯಪ್ಪ ಅವರು ನೀಡಿರುವ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ.

ಶಾಸಕರ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಮತ್ತು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಯಾರಿಗೂ ಗೊತ್ತಿಲ್ಲದೇ ಕದ್ದು ಮುಚ್ಚಿ ತೆಗೆದುಕೊಂಡಿರುವ ತೀರ್ಮಾನವೇನಲ್ಲ. ಚುನಾವಣೆಗೂ ಮೊದಲೇ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಜನಸಮುದಾಯ ನಮ್ಮನ್ನು ನಂಬಿ ಮತ ಚಲಾಯಿಸಿರಬಹುದು. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಮಾಡುವುದು ನಮ್ಮ‌ ಕರ್ತವ್ಯ. ನಮ್ಮ ನಮ್ಮ ಅಭಿಪ್ರಾಯಗಳು ಬೇರೆ ಇರಬಹುದು. ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಬೇಕು. ಯಾವುದೇ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳುವುದರಲ್ಲಿ ತಪ್ಪಿಲ್ಲ,

ಯೋಜನೆಗಳ ಅನುಷ್ಠಾನದಲ್ಲಿ ತಡವಾಗುತ್ತಿರಬಹುದು. ಆದರೆ, ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಿಂತಿಲ್ಲ. ಹಿಂದಿನ ಸರ್ಕಾರವು ಲಕ್ಷಾಂತರ ಕೋಟಿ ರೂ. ಬಿಲ್‌ ಬಾಕಿ ಉಳಿಸಿ ಹೋಗಿತ್ತು. ಅದನ್ನೆಲ್ಲ ನಾವು ಭರಿಸಿದ್ದೇವೆ.‌ ಗ್ಯಾರಂಟಿ ಯೋಜನೆಗಳಿಗೆ ರೂ.56 ಸಾವಿರ ಕೋಟಿ ಹೆಚ್ಚುವರಿ ಖರ್ಚಾಗಿದೆ. ಬಜೆಟ್ ಅಮೌಂಟ್ ರೂ.3.27 ಲಕ್ಷ ಕೋಟಿ ಯಿಂದ, ರೂ.‌3.75 ಲಕ್ಷ ಕೋಟಿಗೆ ಹೆಚ್ಚಾಗಿದೆ. ಮುಂದಿನ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಿಗೆ ಕೊಟ್ಟರೂ ಹೆಚ್ಚಿನ ಹಣ ದೊರಕುತ್ತದೆ ಎಂದು ಹೇಳಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!