ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಗೃಹಜ್ಯೋತಿ ಯೋಜನೆಗೆ 10,100 ಕೋಟಿ ರೂ. ಅನುದಾನ ಮೀಸಲಿಡಲಾಗುತ್ತಿದೆ ಎಂದು ಹೇಳಿದ್ದಾರೆ.
ಸಾರ್ವಜನಿಕ ವಿತರಣಾ ವ್ಯವಸ್ಥೆ ಸುಧಾರಣೆಗೆ 5 ಕೋಟಿ ವೆಚ್ಚದಲ್ಲಿ ಸಗಟು ಗೋದಾಮುಗಳಿಗೆ ಸಿಸಿಟಿವಿ, ಜಿಪಿಎಸ್ ಆಧಾರಿತ ವಾಹನ ಟ್ರಾಕಿಂಗ್ ವ್ಯವಸ್ಥೆ ಮತ್ತು ಕಮಾಂಡ್ ಕಂಟ್ರೋಲ್ ಕೇಂದ್ರ ಸ್ಥಾಪನೆ, ಅನ್ನಭಾಗ್ಯ ಯೋಜನೆ ಸಗಟು ಲಾಭಾಂಶ ಪ್ರತಿ ಕ್ವಿಂಟ್ವಾಲ್ ಗೆ 35 ರೂ. ನಿಂದ 45 ರೂ. ಹೆಚ್ಚಳ, ಗೃಹ ಜ್ಯೋತಿಗೆ 10,100 ಕೋಟಿ ರೂ. ಅನುದಾನ ಹಾಗೂ 8,833 ಕೋಟಿ ವೆಚ್ಚದಲ್ಲಿ 100 ಹೊಸ ಉಪಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ ಎಂದಿದ್ದಾರೆ.