ಬಿ ಖಾತಾ ಆಸ್ತಿ ಹೊಂದಿರುವವರಿಗೆ ಸಿಹಿ ಸುದ್ದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ಮಹಾನಗರ ಪಾಲಿಕೆ ಅಡಿಯಲ್ಲಿ ತಮ್ಮ ಬಿ ಖಾತಾ ಸ್ವತ್ತುಗಳನ್ನು ಎ ಖಾತಾ ಮಾಡಿಸಿಕೊಳ್ಳಬೇಕೆಂದಿರುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಸುಮಾರು 6 ಲಕ್ಷಕ್ಕೂ ಹೆಚ್ಚು ಬಿ ಖಾತಾ ಮನೆಗೆಳನ್ನು ಎ ಖಾತಾ ಮಾಡುವ ಬಗ್ಗೆ ಸಿಎಂ ಪ್ರಸ್ತಾವ ಮಾಡಿದ್ದಾರೆ.
ಈ ಬಗ್ಗೆ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಅಧಿನಿಯಮ ಮತ್ತು ಕರ್ನಾಟಕ ಭೂಕಂದಾಯ ಅಧಿನಿಯಮಗಳ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಲಾಗಿದೆ. ಇದರಿಂದಾಗಿ ಲಕ್ಷಾಂತರ ಕುಟುಂಬಗಳಿಗೆ ಅನುಕೂಲವಾಗಲಿದ್ದು, ಬಿಬಿಎಂಪಿಗೂ ಆದಾಯ ಹೆಚ್ಚಾಗಲಿದೆ.  ಜನರಿಗೆ ಬಿ ಖಾತಾದಿಂದಲೂ ಬ್ಯಾಂಕ್‌ ಸಾಲ ದೊರೆಯುತ್ತದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!