ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರದ ವಿರುದ್ಧ ಪ್ರತಿಭಟಿಸಲು ಆರ್ಥಿಕ ನೆರವು ನೀಡಿದ್ದಾರೆ ಎಂಬ ಆರೋಪದ ಮೇಲೆ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಹಾಗೂ ನ್ಯಾಯವಾದಿ ಅಲೆಸ್ ಬಿಯಾಲಿಯಾಟ್‌ಸ್ಕಿ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಬೆಲಾರಸ್ ನ್ಯಾಯಾಲಯ ಈ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಅಲೆಸ್ ಹಾಗೂ ಅವರ ಮೂವರು ಸಹೋದ್ಯೋಗಿಗಳು ಕೂಡಾ ತಪ್ಪತಸ್ಥರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
ಏನಿದು ಪ್ರಕರಣ?
2020ರ ಚುನಾವಣೆಯಲ್ಲಿ ಸರ್ವಾಧಿಕಾರಿ ಅಲೆಕ್ಸಾಂಡರ್ ಲುಕಶೆಂಕೊ ಮತ್ತೊಮ್ಮೆ ಗೆದ್ದು ಅಧ್ಯಕ್ಷ ಪಟ್ಟ ಏರಿದ್ದರು. ಇದನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಪ್ರತಿಭಟನೆ ನಡೆಸಿದ ಆರೋಪದಲ್ಲಿ ಅಂದು ’ವಯಸ್ನಾ ಮಾನವ ಹಕ್ಕು ಕೇಂದ್ರ’ದ ಸ್ಥಾಪಕ ಅಲೆಸ್ ಹಾಗೂ ಇತರ ಮೂವರು ಸಹೋದ್ಯೋಗಿಗಳನ್ನು ಬಂಧಿಸಲಾಗಿತ್ತು. ಇದೀಗ ಅವರ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
The sentencing of @viasna96 human rights defenders today – including #NobelPeacePrize laureate Ales Bialiatski – is simply appalling. Ales has dedicated his life to fighting against tyranny. He is a true hero of #Belarus & will be honored long after the dictator is forgotten. pic.twitter.com/siSwoYGYWn
— Sviatlana Tsikhanouskaya (@Tsihanouskaya) March 3, 2023