ಪ್ರಧಾನಿ ಮೋದಿಗೆ ನೊಬೆಲ್ ಶಾಂತಿ ಪುರಸ್ಕಾರ? ಎಲ್ಲಾ ಸಾಧ್ಯತೆಗಳಿವೆ ಎಂದ ಆಸ್ಲೆ ಟೋಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿ ಅವರ ಜನಪ್ರಿಯತೆ ಶಿಖರ ಎತ್ತರಕ್ಕೆ ಏರುತ್ತಲೇ ಇದ್ದು, ಮೋದಿ ಅವರು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅರ್ಹರು ಎಂದು ನೊಬೆಲ್ ಪ್ರಶಸ್ತಿ ಸಮಿತಿಯ ಉಪ ನಾಯಕ ಆಸ್ಲೆ ಟೋಜೆ ಹೇಳಿದ್ದಾರೆ.

ನೊಬೆಲ್ ಶಾಂತಿ ಪ್ರಶಸ್ತಿಗೆ ಭಾರತದಿಂದ ಹೆಚ್ಚಿನ ಸಂಖ್ಯೆಯ ನಾಮನಿರ್ದೇಶನಗಳು ಬರುತ್ತಿವೆ. ನೊಬೆಲ್ ಶಾಂತಿ ಪ್ರಶಸ್ತಿಗೆ ಅಗತ್ಯವಿರುವ ಕೆಲಸವನ್ನು ವಿಶ್ವದ ನಾಯಕರು ಮಾಡುತ್ತಿದ್ದಾರೆ, ಮೋದಿಯಂಥ ಪ್ರಬಲ ನಾಯಕರಿಗೆ ಶಾಂತಿ ಸ್ಥಾಪಿಸುವ ಸಾಮರ್ಥ್ಯ ಇದೆ. ಪ್ರಧಾನಿ ಮೋದಿ ಅತ್ಯಂತ ಶಕ್ತಿಶಾಲಿ ದೇಶದಿಂದ ಬಂದವರು, ಅವರನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಅವರ ಮೇಲೆ ಹೆಚ್ಚು ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಯುದ್ಧ ನಿಲ್ಲಿಸಿ ಶಾಂತಿ ಸ್ಥಾಪಿಸುವ ಸಾಮರ್ಥ್ಯ ಪ್ರಧಾನಿ ಮೋದಿಗಿದೆ, ಭಾರತ ಸೂಪರ್ ಪವರ್ ಆಗುತ್ತಿದೆ, ಭಾರತದಲ್ಲಿ ಶಾಂತಿಯ ಪರಂಪರೆಯಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!