ಹೊಸ ದಿಗಂತ ಡಿಜಿಟಲ್ ಡೆಸ್ಕ್:
2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಘೋಷಿಸಲಾಗಿದ್ದು, ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ, ಉಕ್ಕಿನ ಮಹಿಳೆ ಮಾರಿಯಾ ಕೊರಿನಾ ಮಚಾಡೊ ಅವರು ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇದರೊಂದಿಗೆ ಸ್ವಘೋಷಿತ ಶಾಂತಿದೂತ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ತೀವ್ರ ಮುಖಭಂಗವಾಗಿದೆ.
2025ನೇ ಸಾಲಿನ ನೊಬಲ್ ಶಾಂತಿ ಪ್ರಶಸ್ತಿಗೆ 244 ವ್ಯಕ್ತಿಗಳ ಹೆಸರು ನಾಮಿನೇಟ್ ಆಗಿದ್ದರು. ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರು ಸಹ ಶಿಫಾರಸು ಮಾಡಲಾಗಿತ್ತು. ಆದರೆ ಇದೀಗ ಅವರಿಗೆ ಭಾರೀ ನಿರಾಸೆ ಉಂಟಾಗಿದೆ.
ವೆನೆಜುವೆಲಾದ ವಿರೋಧ ಪಕ್ಷದ ಮಾಜಿ ಅಧ್ಯಕ್ಷೀಯ ಅಭ್ಯರ್ಥಿ ಮಾರಿಯಾ ಅವರು ಒಂದು ಕಾಲದಲ್ಲಿ ಆಳವಾಗಿ ವಿಭಜಿಸಲ್ಪಟ್ಟಿದ್ದ ವೆನೆಜುವೆಲಾದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ್ದಕ್ಕಾಗಿ ಅವರನ್ನು ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.