ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು. ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ರಚಿಸಲಾಗಿದ್ದು, ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದ್ದು, ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ನೋಟ್ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯವಹಾರ ನಡೆದಿದೆ ಎಂದು ಚಂದ್ರಶೇಖರ್ ಅವರು ಬರೆದಿದ್ದಾರೆ ಎಂದು ಹೇಳಲಾಗಿದೆ.