ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಪರಿಷತ್ತಿನ ಸಭಾನಾಯಕರನ್ನಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ಎಸ್ ಬೋಸರಾಜು (NS boseraju) ಅವರನ್ನು ಸರ್ಕಾರ ಸೋಮವಾರ ನಾಮನಿರ್ದೇಶನ ಮಾಡಿದೆ.
ಈ ಕುರಿತು ಸೂಕ್ತ ವಿಧಿ ವಿಧಾನಗಳನ್ನು ಅನುಸರಿಸುವಂತೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಇತ್ತೀತ್ತಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಬಳಿಕ ವಿಧಾನಸಭೆ ಹಾಗೂ ಪರಿಷತ್ ಸದಸ್ಯರಲ್ಲದ ಎನ್ಎಸ್ ಬೋಸರಾಜು ಅವರಿಗೆ ಸಚಿವ ಸ್ಥಾನ ಲಭಿಸಿತ್ತು.
ಈ ಸಂಬಂಧ ಸಿಎಂ ಸಿದ್ಧರಾಮಯ್ಯ ( CM Siddaramaiah ) ಅವರು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ಪತ್ರ ಬರೆದಿದ್ದು, ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ವಿಧಾನಪರಿಷತ್ತಿನ ಸಭಾನಾಯಕರನ್ನಾಗಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಸ್ ಎಸ್ ಬೋಸರಾಜು ಅವರನ್ನು ನಾಮನಿರ್ದೇಶನ ಮಾಡಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವಿಟ್ ( Twitter ) ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ, ವಿಧಾನ ಪರಿಷತ್‌ನ ಸಭಾನಾಯಕರಾಗಿ ನಾಮನಿರ್ದೇಶನಗೊಂಡಿರುವ ಸಂಪುಟ ಸಹೋದ್ಯೋಗಿ ಎಸ್ ಎಸ್ ಬೋಸರಾಜು ಅವರಿಗೆ ಅಭಿನಂದನೆಗಳು. ಮೇಲ್ಮನೆಯಲ್ಲಿ ನಮ್ಮ ಸರ್ಕಾರದ ನೀತಿ ನಿರ್ಧಾರಗಳನ್ನು ಅತ್ಯಂತ ಸಮರ್ಥವಾಗಿ ಮಂಡಿಸಲಿದ್ದೀರಿ ಎಂಬ ವಿಶ್ವಾಸವಿದೆ. ಶುಭವಾಗಲಿ ಎಂದು ತಿಳಿಸಿದ್ದಾರೆ.