ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ , ಆನ್‌ಲೈನ್‌ನಲ್ಲಿಯೂ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ 224 ಕ್ಷೇತ್ರಗಳ ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.

ಇದೇ ಮೊದಲ ಬಾರಿಗೆ ಆನ್‌ಲೈನ್‌ನಲ್ಲಿಯೂ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಏ.20 ರವರೆಗೂ ಸಲ್ಲಿಸಬಹುದಾಗಿದೆ. ಆದರೆ ಏ.14ರಂದು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಏ. 16ರಂದು ಭಾನುವಾರದಂದು ಸಲ್ಲಿಕೆಗೆ ಅವಕಾಶ ಇಲ್ಲ.

ಒಟ್ಟಾರೆ ನಾಮಪತ್ರ ಸಲ್ಲಿಕೆಗೆ ಐದು ದಿನಗಳ ಅವಕಾಶವಿದೆ. ಆದರೆ ಆನ್‌ಲೈನ್ ಮೂಲಕ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದ್ದು, ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಎಲ್ಲಾ ದಾಖಲೆಗಳೊಂದಿಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ನಾಮಪತ್ರ ಸಲ್ಲಿಸಲು ಸಮಯ ನಿಗದಿ ಮಾಡಲಾಗಿದೆ. ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಬಹುದಾಗಿದೆ. ದೊಡ್ಡ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆಗೆ ಬರಬಹುದು ಆದರೆ ನಾಮಪತ್ರ ಸಲ್ಲಿಸುವಾಗ ಕಚೇರಿ ಒಳಗೆ ಒಟ್ಟು ಐದು ಜನ ಮಾತ್ರ ಬರಬಹುದು. ಇನ್ನು ಕಚೇರಿ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮೂರು ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!