‘ಹೊಯ್ಸಳರ ಪವಿತ್ರ ತಾಣ’ಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸಲು ನಾಮನಿರ್ದೇಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಯ್ಸಳರ ಕಾಲದ ಬೇಲೂರು, ಹಳೆಬೀಡು ಹಾಗೂ ಸೋಮನಾಥಪುರ ದೇವಾಲಯಗಳನ್ನು ಈ ಸಾಲಿನ ವಿಶ್ವ ಸಂಸ್ಥೆಯ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರ ನಾಮನಿರ್ದೇಶನ ಮಾಡಿದೆ.
ಹೊಯ್ಸಳರ ಕಾಲದಲ್ಲಿ ನಿರ್ಮಿಸಿದ ಈ ದೇಗುಲಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸಬೇಕು ಎಂದು ನಾಮನಿರ್ದೇಶನವಾಗಿದೆ. ಈ ಮೂರು ಕಡೆ ಹೊಯ್ಸಳ ಅರಸರು ದೇವಾಲಯಗಳನ್ನು ನಿರ್ಮಿಸಿದ್ದಾರೆ. ಇವುಗಳ ಕಲೆ, ವಾಸ್ತುಶಿಲ್ಪ ಕಣ್ಣಿಗೆ ಹಬ್ಬ ಹಾಗೂ ಸಂಸ್ಕೃತಿಯ ಪ್ರತೀಕವಾಗಿದೆ. ಹೊಯ್ಸಳರ ಪವಿತ್ರ ತಾಣಗಳು ಎಂಬ ಹೆಸರಿನಲ್ಲಿ ಈ ಮೂರು ದೇಗುಲಗಳನ್ನು ನಾಮನಿರ್ದೇಶನ ಮಾಡಲಾಗಿದೆ.
2015 ರಿಂದ ಈ ದೇಗುಲಗಳು ತಾತ್ಕಾಲಿಕ ಪಟ್ಟಿಯಲ್ಲಿವೆ. ಇದೀಗ ಅವುಗಳನ್ನು ಖಾಯಂ ಪಟ್ಟಿಗೆ ಸೇರಿಸಲು ಕೇಂದ್ರ ಮನವಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!