Tuesday, March 28, 2023

Latest Posts

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧದ ಜಾಮೀನು ರಹಿತ ಬಂಧನ ವಾರಂಟ್ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕಳೆದ ವರ್ಷ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಮಹಿಳಾ ಮ್ಯಾಜಿಸ್ಟ್ರೇಟ್‌ಗೆ ಬೆದರಿಕೆ ಹಾಕಿದ್ದಕ್ಕಾಗಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಹೊರಡಿಸಲಾದ ಜಾಮೀನು ರಹಿತ ಬಂಧನ ವಾರಂಟ್ ಅನ್ನು ಇಲ್ಲಿನ ನ್ಯಾಯಾಲಯವು ಮಾರ್ಚ್ 16 ರವರೆಗೆ ಅಮಾನತುಗೊಳಿಸಿದೆ.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಝೆಬಾ ಚೌಧರಿ ಮತ್ತು ಇಸ್ಲಾಮಾಬಾದ್ ಪೊಲೀಸ್ ಅಧಿಕಾರಿಗಳ ವಿರುದ್ಧ ಬೆದರಿಕೆ ಭಾಷೆ ಬಳಸಿದ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಖಾನ್ ವಿರುದ್ಧ ಸೋಮವಾರ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿತ್ತು. ಇಂದು ಇಮ್ರಾನ್‌ ಖಾನ್‌ ಅನ್ನು ಬಂಧಿಸುವ ಸಾಧ್ಯತೆ ಇತ್ತು. ಈ ವೇಳೆ ಇಲ್ಲಿನ ನ್ಯಾಯಾಲವು ಬಂಧನ ವಾರಂಟ್‌ ಅನ್ನು ಮಾರ್ಚ್‌ 16ರ ವರೆಗೆ ತಡೆ ಅಮಾನತುಗೊಳಿಸಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!