ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಯ ಕುರಿತು ಪಕ್ಷಾತೀತ ಚರ್ಚೆ: ಎಚ್. ಕೆ.ಪಾಟೀಲ್

ಹೊಸದಿಗಂತ ವರದಿ, ಅಂಕೋಲಾ:

ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ಪರಿಶೀಲಿಸಲು ಮೂರು ದಿನಗಳ ಜಿಲ್ಲೆಯಲ್ಲಿ ಉಳಿದುಕೊಂಡು ಪಕ್ಷಾತೀತ ಚರ್ಚೆ ನಡೆಸಿ ಯಾವ ರೀತಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬಹುದು ಎನ್ನುವ ಕುರಿತು ತೀರ್ಮಾನ ಮಾಡಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ.ಪಾಟೀಲ್ ಹೇಳಿದರು .

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯ ಮೂಲಕ ಉದ್ಯೋಗಾವಕಾಶ ಹೆಚ್ಚಿಸುವ ಕುರಿತು ಪ್ರಯತ್ನಗಳು ನಡೆಯಬೇಕು ಎಂಬ ಶಾಸಕ ಸತೀಶ ಸೈಲ್ ಅವರ ಕೋರಿಕೆಯನ್ನು ಆಲಿಸಿ ಮಾತನಾಡಿದ ಅವರು ಪ್ರವಾಸೋದ್ಯಮ ಬೆಳವಣಿಗೆ ಯಾವ ರೀತಿಯ ಅವಕಾಶಗಳು ಇವೆ ಅದಕ್ಕಾಗಿ ಏನು ಮಾಡಬೇಕು ಎನ್ನುವ ಕುರಿತು ಚರ್ಚೆಯ ಸಂದರ್ಭದಲ್ಲಿ ಗಮನಕ್ಕೆ ತರುವಂತೆ ತಿಳಿಸಿದರು.

ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಮಾತನಾಡಿ ಕಾರವಾರ ಅಂಕೋಲಾ ಭಾಗದ ಜನರು ಯೋಜನೆಗಳಿಗೆ ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಕಷ್ಟದ ಜೀವನ ನಡೆಸುತ್ತಲೇ ಇದ್ದಾರೆ ದಶಕಗಳು ಕಳೆದರೂ ಹಲವಾರು ಜನರಿಗೆ ಯೋಜನೆಗಳ ಪರಿಹಾರ ಇದುವರೆಗೆ ತಲುಪಿಲ್ಲ ಜಿಲ್ಲೆಯ ಕರಾವಳಿ ತಾಲೂಕುಗಳ ನದಿ ಹಿನ್ನೀರಿನ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೇರಳವಾಗಿ ಅವಕಾಶಗಳಿವೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶ ಒದಗಿಸಲು ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದರು.

ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಿರಸಿ ಶಾಸಕ ಭೀಮಣ್ಣ ನಾಯ್ಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!