I.N.D.I.A ಮೈತ್ರಿಕೂಟಕ್ಕೆ ಪಕ್ಷೇತರ ಅಭ್ಯರ್ಥಿಯ ಬೆಂಬಲ: ಒಟ್ಟು ಸಂಖ್ಯೆ 233 ಕ್ಕೆ ಏರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್ : 

ಕಾಂಗ್ರೆಸ್ ಗೆ ಸಾಂಗ್ಲಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದ ಸಂಸದ ವಿಶಾಲ್ ಪಾಟೀಲ್ ಅವರು ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ I.N.D.I.A ಮೈತ್ರಿಕೂಟದ ಸಂಖ್ಯೆ 233 ಕ್ಕೆ ಏರಿಕೆಯಾಗಿದೆ.

ಪಾಟೀಲ್ ಬೆಂಬಲವನ್ನು ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಹಾರಾಷ್ಟ್ರದ ಜನರು ವಿಶ್ವಾಸಘಾತುಕತನ, ದುರಹಂಕಾರ ಮತ್ತು ವಿಭಜನೆಯ ರಾಜಕಾರಣವನ್ನು ಸೋಲಿಸಿದರು. ಇದು ನಮ್ಮ ಸ್ಫೂರ್ತಿದಾಯಕ ಧೀಮಂತರಾದ ಛತ್ರಪತಿ ಶಿವಾಜಿ ಮಹಾರಾಜರು, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾಸಾಹೇಬ್ ಡಾ. ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವವಾಗಿದೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಾಂಗ್ಲಿಯಿಂದ ಚುನಾಯಿತ ಸಂಸದ ವಿಶಾಲ್ ಪಾಟೀಲ್ ಅವರು ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ಸೂಚಿಸಿರುವುದನ್ನು ಸ್ವಾಗತಿಸುತ್ತೇವೆ ಎಂದು ಖರ್ಗೆ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಉದ್ಧವ್‌ ಠಾಕ್ರೆ ಅವರ ಶಿವಸೇನೆ, ಕಾಂಗ್ರೆಸ್‌, ಎನ್‌ಸಿಪಿ ಮೈತ್ರಿ ಮಾಡಿಕೊಂಡು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದವು. ಸಾಂಗ್ಲಿಯಲ್ಲಿ ಉದ್ಧವ್‌ ಠಾಕ್ರೆ ಅವರ ಪಕ್ಷದಿಂದ ಚಂದ್ರಹರ ಸುಭಾಶ್‌ ಪಾಟೀಲ್‌ ಕಣಕ್ಕೆ ಇಳಿದಿದ್ದರು. ಆದರೆ ಫಲಿತಾಂಶ ಪ್ರಕಟವಾದಾಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ವಿಶಾಲ್‌ ಪ್ರಕಾಶ್‌ಬಾಪು ಪಾಟೀಲ್‌ 1,00,053 ಮತಗಳ ಅಂತರದಿಂದ ಜಯಗಳಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!