ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಲ್ಲ: ರಾಜ್ಯ ಸರಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪ ಇಟ್ಟಿದ್ದಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದ್ದು, ಅತಿಥಿ ಉಪನ್ಯಾಸಕರ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದೆ.

ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್‌ ಸದಸ್ಯ ಅ. ದೇವೇಗೌಡ ಅವರು ನಿಯಮ 72ರ ಅಡಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಗಮನ ಸೆಳೆಯುವ ಸೂಚನೆಯನ್ನು ಮಂಡಿಸಿದರು. ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಸುಧಾಕರ್, ಖಾಲಿ ಹುದ್ದೆಗೆ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಸದನಕ್ಕೆ ಉತ್ತರ ನೀಡಿದರು.

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಬಗ್ಗೆ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಸಮಿತಿಯ ವರದಿಯ ಪ್ರಕಾರ ಪರಿಶೀಲನೆ ಮಾಡಲಾಗಿದೆ. ವಿವಿಧ ಮಾನದಂಡದ ಆಧಾರದ ಮೇಲೆ ವೇತನ ನಿಗದಿ ಮಾಡಲಾಗಿದೆ. 26 ಸಾವಿರದಿಂದ 32 ಸಾವಿರದವರೆಗೂ ವೇತನ ನೀಡಲಾಗುತ್ತಿದೆ. ಆನ್‌ಲೈನ್ ಕೌನ್ಸೆಲಿಂಗ್ ಮೂಲಕ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಅತಿಥಿ ಉಪನ್ಯಾಸಕರನ್ನು ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಸಾಧ್ಯವಿಲ್ಲ. ಬದಲಾಗಿ ಕಾಲೇಜುಗಳಲ್ಲಿ ಹೆಚ್ಚುವರಿ ಅವಧಿಗೆ ಶೈಕ್ಷಣಿಕ ವರ್ಷಕ್ಕೆ ಸೀಮಿತವಾಗಿ ತಾತ್ಕಾಲಿಕ ನೇಮಕ ಮಾಡಿಕೊಳ್ಳುತ್ತಿರುವುದಾಗಿ ಸ್ಪಷ್ಟನೆ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!