ಮಡಿಕೇರಿಯಲ್ಲಿ ಮತದಾನ ಮಾಡದವರಿಗೆ ಪ್ರವಾಸಿ ತಾಣಗಳಿಗೆ ಪ್ರವೇಶವಿಲ್ಲ

ಹೊಸದಿಗಂತ ವರದಿ ಮಡಿಕೇರಿ:

ಮತದಾನದ ದಿನ ಮತದಾನ ಮಾಡದೇ ಬಂದವರಿಗೆ ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವೇಶವನ್ನು ನಿಷೇಧಿಸಿ ಉಪವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪನಿರ್ದೇಶಕ ಡಾ.ಯತೀಶ್ ಉಳ್ಳಾಲ್ ಅವರು ಆದೇಶ ಹೊರಡಿಸಿದ್ದಾರೆ.

ಇಲ್ಲಿನ ಪ್ರವಾಸಿತಾಣಗಳಾದ ರಾಜಾಸೀಟು, ಸನ್ನಿಸೈಡ್ ಮ್ಯೂಸಿಯಂ, ಅಬ್ಬಿ ಫಾಲ್ಸ್, ಮಲ್ಲಳ್ಳಿ ಫಾಲ್ಸ್‌ಗಳಲ್ಲಿ ಮತದಾನ ಮಾಡಿದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಮಕ್ಕಳು ಹಾಗೂ ಹೊರರಾಜ್ಯದ ಪ್ರವಾಸಿಗರನ್ನು ಹೊರತುಪಡಿಸಿ ಅಂದು ಮತದಾನ ಮಾಡದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಈಗಾಗಲೇ ಕುಶಾಲನಗರದಲ್ಲಿರುವ ಕಾವೇರಿ ನಿಸರ್ಗಧಾಮ, ದುಬಾರೆ ಆನೆ ಶಿಬಿರ, ಹಾರಂಗಿಯ ಟ್ರೀಪಾರ್ಕ್‌ಗಳಿಗೆ ಮೇ 10ರಂದು ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!