ಈಶಾನ್ಯ ಕರ್ನಾಟಕ ಪದವೀಧರ ಫಲಿತಾಂಶ: ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಗೆ ಗೆಲುವು

ಹೊಸದಿಗಂತ ವರದಿ,ಕಲಬುರಗಿ:

ಈಶಾನ್ಯ ಪದವೀಧರ ಮತಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಎರಡನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಅವರು 4,651 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಎರಡನೇ ಪ್ರಾಶಸ್ತ್ಯ ಮತ ಎಣಿಕೆ ನಂತರ ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ 43,484 ಮತ, ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಅವರು 38,833 ಮತಗಳು ಪಡೆದರು.

ಚಲಾವಣೆಯಾದ 1,09,031 ಮತಗಳ ಪೈಕಿ 96,519 ಮತಗಳು ಪುರಸ್ಕೃತವಾದರೆ, 12,513 ತಿರಸ್ಕೃತವಾಗಿದ್ದವು.

ಚುನಾವಣಾಧಿಕಾರಿ ಕೃಷ್ಣ ಭಾಜಪೇಯಿ ಅವರು ವಿಜೇತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ ಅವರಿಗೆ ಗೆಲುವಿನ ಪ್ರಮಾಣ ಪತ್ರ ವಿತರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!