ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಗಾರು ಅಬ್ಬರಕ್ಕೆ ಉತ್ತರ ಭಾರತ ಅಕ್ಷರಶ ನಲುಗಿದ್ದು, ಮಳೆ ಹಾಗೂ ಪ್ರವಾಹಕ್ಕೆ ಅನೇಕ ರಾಜ್ಯಗಳು ತತ್ತರಿಸಿದೆ.
ಇತ್ತ ಅತೀ ಹೆಚ್ಚು ಹಾನಿಯಾಗಿರುವ ಹಾಗೂ ಭಾರಿ ಮಳೆಯಲ್ಲಿ ಮುಳುಗಡೆಯಾಗಿರುವ ಹಿಮಾಚಲ ಪ್ರದೇಶ ಹಾಗೂ ಉತ್ತರಖಂಡ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ. ಮಳೆಯಿಂದ ತತ್ತರಿಸಿರುವ ರಾಜ್ಯಕ್ಕೆ ಅಗತ್ಯ ನೆರವು ನೀಡುವುದಾಗಿ ಹೇಳಿದ್ದಾರೆ.
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಕು ಜೊತೆ ಮಾತನಾಡಿದ ಪ್ರಧಾನಿ ಮೋದಿ, ಹಿಮಾಚಲ ಪರಿಸ್ಥಿತಿ ಕುರಿತು ವಿವರಣೆ ಪಡೆದಿದ್ದಾರೆ. ಇದೇ ವೇಳೆ 10ಕ್ಕೂ ಹೆಚ್ಚು ಜಿಲ್ಲೆಗಳು ತೀವ್ರವಾಗಿ ಸಂಕಷ್ಟಕ್ಕೆ ಸಿಲುಕಿರುವ ಮಾಹಿತಿಯನ್ನು ನೀಡಿದ್ದಾರೆ. ರಕ್ಷಣಾ ಕಾರ್ಯಗಳು ಬಹುತೇಕ ಅಂತ್ಯಗೊಂಡಿದೆ. ಸುರಕ್ಷತೆಗಾಗಿ ಎನ್‌ಡಿಆರ್‌ಎಪ್ ಸೇರಿದಂತೆ ಹಲವು ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀದಿದ್ದರೆ. ಈ ವೆಲ್ ಪರಿಹಾರ ಸಾಮಾಗ್ರಿ ಸೇರಿದಂತೆ ಇತರ ಅಗತ್ಯ ನೆರವನ್ನು ಕೇಂದ್ರ ನೀಡಲಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.
ಇತ್ತ ಉತ್ತರಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಜೊತೆ ಮಾತುಕತೆ ನಡೆಸಿದ ಮೋದಿ, ರಾಜ್ಯದ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಅವಲೋಕಿಸಿದ್ದಾರೆ. ಇದೇ ವೇಳೆ ಪರಿಹಾರ ಹಾಗೂ ನೆರವಿನ ಭರವಸೆ ನೀಡಿದ್ದಾರೆ.
ಪ್ರಧಾನಿ ಮೋದಿ ಸಭೆ
ಇದಕ್ಕೂ ಮೊದಲು ಪ್ರಧಾನಿ ಮೋದಿ ಭಾರತದ ಹಲವು ಭಾಗಗಳಲ್ಲಿ ಅತಿಯಾದ ಮಳೆಯ ಹಿನ್ನೆಲೆಯಲ್ಲಿ ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು. ಳೀಯ ಆಡಳಿತಗಳು, ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ತಂಡಗಳು ಸಂತ್ರಸ್ತರ ಸುರಕ್ಷತೆಯನ್ನು ನೋಡಿಕೊಳ್ಳಲು ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.