September 16, 2026
Wednesday, September 16, 2026
spot_img

ವರುಣನ ಆರ್ಭಟಕ್ಕೆ ಉತ್ತರ ಭಾರತ ತತ್ತರ: ದೆಹಲಿಗೆ ರೆಡ್ ಅಲರ್ಟ್, ಹಲವು ರಾಜ್ಯಗಳಲ್ಲಿ ಪ್ರವಾಹ ಭೀತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ದೆಹಲಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (IMD) ದೆಹಲಿಗೆ ರೆಡ್ ಅಲರ್ಟ್ ಘೋಷಿಸಿ, ಜನರು ಎಚ್ಚರಿಕೆಯಿಂದ ಇರಲು ಸೂಚಿಸಿದೆ.

ದೆಹಲಿಯಲ್ಲಿ ರಸ್ತೆಗಳು ಜಲಾವೃತ

ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ದೆಹಲಿಯ ಪ್ರಮುಖ ರಸ್ತೆಗಳು ನೀರಿನಿಂದ ತುಂಬಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ಪರದಾಡಿದ್ದಾರೆ.

ಇದನ್ನೂ ಓದಿ:

ಇತರೆ ರಾಜ್ಯಗಳಲ್ಲೂ ಸಂಕಷ್ಟ

ಗುಜರಾತ್‌ನ ಸುರತ್‌ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಉತ್ತರಾಖಂಡ ಹಾಗೂ ಕೇರಳದಲ್ಲಿ ನಿರಂತರ ಮಳೆಯಿಂದ ಭೂಕುಸಿತದ ಭೀತಿ ಹೆಚ್ಚಾಗಿದೆ. ಸ್ಥಳೀಯ ಆಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಧರೆಗುರುಳಿದ ಮರಗಳು

ದೆಹಲಿಯ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಗೆ ಮರಗಳು ಉರುಳಿಬಿದ್ದಿದ್ದು, ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

ಮಳೆ ಇನ್ನೂ ಮುಂದುವರಿಯುವ ಸಾಧ್ಯತೆ

ಅರಬ್ಬಿ ಸಮುದ್ರದಿಂದ ತೇವಾಂಶಯುಕ್ತ ಮುಂಗಾರು ಮಾರುತಗಳು ಬೀಸುತ್ತಿರುವ ಕಾರಣ ಮುಂದಿನ ಕೆಲ ದಿನಗಳ ಕಾಲ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !