ಕಿಮ್‌ ಉದ್ಧಟತನ: ಮತ್ತೊಮ್ಮೆ ಖಂಡಾಂತರ ಕ್ಷಿಪಣಿ ಉಡಾವಣೆ, ಪ್ರಕ್ಷುಬ್ಧ ವಾತಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರ ಕೊರಿಯಾ ಇಂದು ಬೆಳಗ್ಗೆ ಖಂಡಾಂತರ ಕ್ಷಿಪಣಿಯನ್ನು ಉಡಾವಣೆ ಮಾಡಿದೆ. ಇತ್ತೀಚೆಗಷ್ಟೇ ಉತ್ತರ ಕೊರಿಯಾ ದಕ್ಷಿಣ ಕೊರಿಯಾದತ್ತ ಫಿರಂಗಿ ಶೆಲ್‌ಗಳಿಂದ ಭಾರಿ ಗುಂಡಿನ ದಾಳಿ ನಡೆಸಿದ್ದು, ಇದೀಗ ಜಪಾನ್‌ನ ವಿಶೇಷ ಆರ್ಥಿಕ ವಲಯದ ಕಡೆಗೆ ಉತ್ತರ ಕೊರಿಯಾ ಖಂಡಾಂತರ ಕ್ಷಿಪಣಿಯನ್ನು ಹಾರಿಸಿದೆ ಎಂದು ಜಪಾನ್ ಹೇಳಿದೆ. ಇದೀಗ ಉಭಯ ದೇಶಗಳ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಉತ್ತರಕೊರಿಯಾ ತನ್ನ ಪರಮಾಣು ಮತ್ತು ಕ್ಷಿಪಣಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮತ್ತಷ್ಟು ವೇಗಗೊಳಿಸಲು ಯೋಜಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕೊರಿಯಾ ಮತ್ತೊಂದು ಖಂಡಾಂತರ ಕ್ಷಿಪಣಿ ಉಡಾವಣೆ ಮಾಡಿದೆ ಎಂದು ಜಪಾನ್‌ ಆರೋಪಿಸಿದೆ. ಹೊಸದಾಗಿ ಉಡಾವಣೆಯಾಗಿರುವ ಕ್ಷಿಪಣಿ ಕುರಿತು ಹೆಚ್ಚಿನ ವಿಷಯಗಳನ್ನು ವಿಚಾರಣೆ ನಡೆಸಲಾಗುತ್ತಿದ್ದು, ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಕ್ಷಿಪಣಿ ಉಡಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ತಮ್ಮ ವಿರುದ್ಧ ಅಮೆರಿಕ, ದಕ್ಷಿಣ ಕೊರಿಯಾ ಮತ್ತು ಜಪಾನ್‌ನಂತಹ ರಾಷ್ಟ್ರಗಳು ಯಾವುದೇ ಕ್ರಮ ಕೈಗೊಂಡರೆ ಅಣ್ವಸ್ತ್ರಗಳ ಮೂಲಕ ಉತ್ತರ ನೀಡುವುದಾಗಿ ಕಿಮ್ ಜಾಂಗ್ ಉನ್ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕೊರಿಯಾ ಪರಮಾಣು ಅಸ್ತ್ರ ಪರೀಕ್ಷೆ ನಡೆಸಲಿದೆ ಎಂದು ಅಮೆರಿಕದ ಗುಪ್ತಚರ ಮೂಲಗಳು ಈಗಾಗಲೇ ಹೇಳಿವೆ. ಅಮೆರಿಕ, ದಕ್ಷಿಣ ಕೊರಿಯಾ ಮತ್ತು ಜಪಾನ್ ಅಲರ್ಟ್ ಆಗಿದ್ದು, ನಾನಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ಹಿಂದೆ ಸರಿಯದಿದ್ದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆ ದೇಶಗಳಿಗೆ ಉತ್ತರ ಕೊರಿಯಾ ಎಚ್ಚರಿಕೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!