October 5, 2026
Monday, October 5, 2026
spot_img

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಬಿಜೆಪಿ-ಕಾಂಗ್ರೆಸ್ ಸೇರಿ 6 ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಹೊಸದಿಗಂತ ವರದಿ ಕಲಬುರಗಿ:

ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಒಂದು ಸ್ಥಾನ ಆಯ್ಕೆಯ ಚುನಾವಣೆಗೆ ಅ.5 ರಂದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ಸೇರಿದಂತೆ ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಶಶೀಲ್ ಜಿ. ನಮೋಶಿ ತಂದೆ ಗಂಗಾಧರ ನಮೋಶಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶರಣಪ್ಪ ಮಟ್ಟೂರ ತಂದೆ ಹಣಮಂತಪ್ಪ ಅವರು ತಲಾ ಮೂರು ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಪಕ್ಷೇತರ ಅಭ್ಯರ್ಥಿಯಾಗಿ ಮಹೆಬೂಬ್ ತಂದೆ ಮಹ್ಮದ್ ಖಾಜಿ ಹುಸೇನ ವಂಟೆಳಿ, ರಾಹಕುಮಾರ‌ ತಂದೆ ಮಾಣಿಕಪ್ಪ, ಶಿವಶಂಕರ‌ ತಂದೆ ಅಣ್ಣಪ್ಪ ಹಾಗೂ ತುಳಸಪ್ಪ ದಾಸರ ತಂದೆ ಕರಿಯಪ್ಪ ದಾಸರ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ ಒಂಭತ್ತು ಅಭ್ಯರ್ಥಿಗಳಿಂದ ಹದಿನೈದು ನಾಮಪತ್ರ‌ ಸಲ್ಲಿಕೆಯಾದಂತಾಗಿದೆ.

Must Read