ಹೊಸದಿಗಂತ ವರದಿ ಕಲಬುರಗಿ:
ಕರ್ನಾಟಕ ವಿಧಾನ ಪರಿಷತ್ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಯವರೆಗೆ ಶೇ.69.83ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿ ಜಾಹೀರಾ ನಸ್ಸೀಮ ತಿಳಿಸಿದ್ದಾರೆ.
ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 144 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಬೆಳಿಗ್ಗೆ 10 ಗಂಟೆಗೆ ಶೇ.13.51ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 12 ಗಂಟೆಗೆ ಮತದಾನದ ಪ್ರಮಾಣ ಶೇ.43.16ಕ್ಕೆ ಏರಿಕೆಯಾಗಿದ್ದು, ಮಧ್ಯಾಹ್ನ 2 ಗಂಟೆಯ ವೇಳೆಗೆ ಶೇ.69.83ರಷ್ಟು ಮತದಾನ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಮತದಾನದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ.ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.



