ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕಲಬುರಗಿ:
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಅವರು ನಗರದಲ್ಲಿ ಮಾತನಾಡಿ, ಇಲ್ಲಿಯವರೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಎಂದು ಕರೆಯಲಾಗುತ್ತಿತ್ತು, ಆದರೆ ಇನ್ನೂ ಮುಂದೆ ರಸ್ತೆ ಸಾರಿಗೆ ನಿಗಮಗಳ ಅಧಿನಿಯಮ಼ 1950ರ (1950ರ ಕೇಂದ್ರ ಅಧಿನಿಯಮ 64) ಕಲಂ 3ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಯ ಹೆಸರನ್ನು ಕಲ್ಯಾಣ ಕನಾ೯ಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡಲಾಗಿದೆ ಎಂದರು.