15 ನಿಮಿಷ ಬೇಡ, 15 ಸೆಕೆಂಡು ಕೊಟ್ಟರೆ ಸಾಕು, ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆ: ಓವೈಸಿ ಸಹೋದರರ ವಿರುದ್ಧ ಬಿಜೆಪಿ ನಾಯಕಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಮಗೆ 15 ನಿಮಿಷ ಬೇಡ, 15 ಸೆಕೆಂಡುಗಳ ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು. ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆ ಎಂದು ಬಿಜೆಪಿ ನಾಯಕಿ ನವನೀತ್ ರಾಣಾ ಹೈದರಾಬಾದ್‌ನಲ್ಲಿ ಖಡಕ್‌ ಆಗಿ ಮಾತನಾಡಿದ್ದಾರೆ.

ಹೈದರಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಪರ ಪ್ರಚಾರ ನಡೆಸಿದ ನವನೀತ್‌ ರಾಣಾ, 2013ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಕ್ಬರುದ್ದೀನ್ ಓವೈಸಿ ನೀಡಿದ್ದ ದೇಶದಲ್ಲಿನ ಹಿಂದು-ಮುಸ್ಲಿಂ ಅನುಪಾತವನ್ನು ಸಮತೋಲನಗೊಳಿಸಲು 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ ಸಾಕು ಎಂದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಬ್ಬರೂ ಅಣ್ಣ-ತಮ್ಮಂದಿರು ತಾನೇ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆ ಎಂದಿದ್ದಾರೆ.

ಅಕ್ಬರುದ್ದೀನ್ ಅವರ ಹಿಂದಿನ ವಿವಾದಾತ್ಮಕ ಹೇಳಿಕೆಯನ್ನು ಉಲ್ಲೇಖಿಸಿ ನವನೀತ್ ರಾಣಾ ಅವರು ವಾಗ್ದಾಳಿ ನಡೆಸಿದರು. ಇದೇ ವೇಳೆ ಅವರು ಹೈದರಾಬಾದ್ ಪಾಕಿಸ್ತಾನವಾಗದಂತೆ ತಡೆಯಲು ಈ ಚುನಾವಣೆ ನಿರ್ಣಾಯಕವಾಗಿದೆ. ಮತದಾನ ರಾಷ್ಟ್ರದ ಹಿತಾಸಕ್ತಿಯಿಂದ ಕೂಡಿರಬೇಕು. ನೀವು ಮಾಧವಿ ಲತಾ ಅವರಿಗೆ ಮತ ನೀಡಿ ಆಯ್ಕೆ ಮಾಡಿ. ಆಕೆ ನಮ್ಮ ಸಿಂಹಿಣಿ, ಸಂಸತ್ತಿನಲ್ಲಿ ನಮ್ಮನ್ನು ಪ್ರತಿನಿಧಿಸಬೇಕು. ಈ ಬಾರಿ ಮತದಾನವು ಹೈದರಾಬಾದ್‌ನ ಎಲ್ಲಾ ಹಿಂದುಗಳನ್ನು ಜಾಗೃತಗೊಳಿಸಲು ಸಹಾಯ ಮಾಡುತ್ತದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!