ಮಹಾ ಕುಂಭಮೇಳದಲ್ಲಿ ಒಂದೇ ಒಂದು ಕಿರುಕುಳ, ಅಪಹರಣ, ದರೋಡೆ ಕೇಸ್‌ ವರದಿಯಾಗಿಲ್ಲ: ಸಿಎಂ ಯೋಗಿ ಆದಿತ್ಯನಾಥ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಕಿರುಕುಳ, ಅಪಹರಣ, ದರೋಡೆ ಅಥವಾ ಕೊಲೆಯ ಒಂದೇ ಒಂದು ಪ್ರಕರಣವೂ ವರದಿಯಾಗಿಲ್ಲ. ಅರವತ್ತಾರು ಕೋಟಿ ಜನರು ಆಗಮಿಸಿ ಭಾಗವಹಿಸಿದರು. ಕುಂಭಮೇಳದಲ್ಲಿ ಪಾಲ್ಗೊಂಡು ಸಂತೋಷದಿಂದ ಹೋಗಿದ್ದಾರೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ. ಆ ಮೂಲಕ ಕುಂಭಮೇಳವನ್ನು ಟೀಕಿಸಿದ್ದ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ವಿಧಾನಸಭೆಯಲ್ಲಿ ಅಂಗೀಕರಿಸಲಾದ 2025-26ನೇ ಸಾಲಿನ ರಾಜ್ಯ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿಪಕ್ಷಗಳಿಗೆ ಚಾಟಿ ಬೀಸಿದ ಸಿಎಂ,ನಿಮ್ಮ ನಕಾರಾತ್ಮಕ ಪ್ರಚಾರವು ಭಾರತದ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಾಗಲಿಲ್ಲ. ನೀವು ನಿಮ್ಮ ಪ್ರಚಾರವನ್ನ ಮುಂದುವರಿಸಿದ್ದೀರಿ.. ಆದರೆ ದೇಶದ ಜನರು ನಿಮ್ಮ ನಕಾರಾತ್ಮಕ ಮಾತುಗಳನ್ನು ನಂಬಲಿಲ್ಲ. ಜನರು ಶೀಘ್ರದಲ್ಲೇ ನಿಮ್ಮ ಮಾತನ್ನು ಕೇಳುವುದನ್ನು ನಿಲ್ಲಿಸುತ್ತಾರೆ ಎಂದು ನಾನು ನಂಬುತ್ತೇನೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಕಿಡಿಕಾರಿದ್ದಾರೆ.

ನಾನು ದೋಣಿ ಚಾಲಕನ ಕುಟುಂಬದ ಯಶಸ್ಸಿನ ಕಥೆಯನ್ನು ಹೇಳುತ್ತಿದ್ದೇನೆ. ಅವರ ಬಳಿ 130 ದೋಣಿಗಳಿವೆ. 45 ದಿನಗಳಲ್ಲಿ (ಮಹಾ ಕುಂಭ) ಅವರು 30 ಕೋಟಿ ರೂ. ಲಾಭ ಗಳಿಸಿದ್ದಾರೆ. ಇದರರ್ಥ ಪ್ರತಿ ದೋಣಿಯಿಂದ 23 ಲಕ್ಷ ರೂ. ಗಳಿಸಿದ್ದಾರೆ. ಪ್ರತಿದಿನ ಅವರು ಒಂದು ದೋಣಿಯಿಂದ 50,000-52,000 ರೂ. ಗಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮಹಾ ಕುಂಭಮೇಳಕ್ಕೆ 7,500 ಕೋಟಿ ರೂಪಾಯಿ ಹೂಡಿಕೆ ಮಾಡಲಾಗಿತ್ತು. ಇದರಿಂದ ದಾಖಲೆಯ 3 ಲಕ್ಷ ಕೋಟಿ ರೂಪಾಯಿ ವ್ಯವಹಾರ ಆಗಿದೆ . ಹೋಟೆಲ್ ಉದ್ಯಮದಲ್ಲಿ 40,000 ಕೋಟಿ ರೂ., ಆಹಾರ ಮತ್ತು ದಿನನಿತ್ಯದ ಅಗತ್ಯ ವಸ್ತುಗಳಲ್ಲಿ 33,000 ಕೋಟಿ ರೂ., ಸಾರಿಗೆಯಲ್ಲಿ 1.5 ಲಕ್ಷ ಕೋಟಿ ರೂ., ಧಾರ್ಮಿಕ ಕೊಡುಗೆಗಳಲ್ಲಿ 20,000 ಕೋಟಿ ರೂ., ದೇಣಿಗೆಗಳಲ್ಲಿ 660 ಕೋಟಿ ರೂ., ಟೋಲ್ ತೆರಿಗೆಯಲ್ಲಿ 300 ಕೋಟಿ ರೂ., ಇತರ ಆದಾಯದಲ್ಲಿ 66,000 ಕೋಟಿ ರೂ. ಗಳಿಸಿದೆ ಎಂದು ವಿವರಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!