ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರನ್ನು ಬಳ್ಳಾರಿ ಜಿಲ್ಲೆಗೆ ಸ್ಥಳಾಂತರಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ನಟನ ಭೇಟಿಗೆ ಯಾರಿಗೂ ಅವಕಾಶ ನೀಡಬಾರದು ಎಂದು ಡಿಐಜಿ ಖಡಕ್ ಆದೇಶ ನೀಡಿದೆ. ದರ್ಶನ್ ಪರ ವಕೀಲರು, ದರ್ಶನ್ ಪತ್ನಿ ಹಾಗೂ ಸಂಬಂಧಿಕರಿಗೆ ಮಾತ್ರ ಅವಕಾಶ. ಸಿನಿಮಾ ನಟರಿಗೆ, ರಾಜಕೀಯ ವ್ಯಕ್ತಿಗಳು ಅಭಿಮಾನಿಗಳಿಗೆ ಅವಕಾಶ ಇಲ್ಲ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣ ಬೆಳಕಿಗೆ ಬಂದ ನಂತರ ನಟ ದರ್ಶನ್ ಮತ್ತು ಆರೋಪಿ ತಂಡವನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ. ಇಂದು ಬೆಳಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಅವರನ್ನು ಪೊಲೀಸ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಯಿತು.