ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ, ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತೇವೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯ ಇರಲ್ಲ. ಪರಿಶೀಲಿಸಿ ಸತ್ಯ ಇದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಇದಕ್ಕೆ ಸಂಬಂಧಪಟ್ಟ ಡಿಸಿಪಿ ಈ ಪ್ರಕರಣದ ತನಿಖೆ ಮಾಡುತ್ತಾರೆ. ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳಿದ್ದರೆ ಪರಿಶೀಲನೆ ನಡೆಸಲಾಗುವುದು. ವರದಿ ಆಧರಿಸಿ ಕ್ರಮ ತೆಗೆದುಕೊಳ್ಳುತ್ತೇವೆಂದು ಭರವಸೆ ನೀಡಿದರು.
ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿ ವಿನಯ್ ಸೋಮಯ್ಯ ಬಿಜೆಪಿ ಕಾರ್ಯಕರ್ತರಾಗಿದ್ದು, ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ತಮ್ಮ ಸಾವಿಕೆ ನಿರ್ಧಾರಕ್ಕೆ ಕಾರಣ ತಿಳಿಸಿದ್ದಾರೆ. ಅಲ್ಲದೆ, ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಮೇಲೆ ಆರೋಪ ಮಾಡಿದ್ದಾರೆಂದು ಹೇಳಲಾಗುತ್ತಿದೆ.