Thursday, July 7, 2022

Latest Posts

ಸ್ವಾಮೀಜಿಗಳಿಗೆ ಅಪಮಾನಿಸಿಲ್ಲ, ಅಗೌರವ ತೋರಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಸಿದ್ದರಾಮಯ್ಯ

ಹೊಸದಿಗಂತ ವರದಿ, ಮೈಸೂರು
ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಿಕೊಳ್ಳುತ್ತಾರೆ. ಹಾಗಿರುವಾಗ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಜ್ ಧರಿಸಿದರೆ ತಪ್ಪೇನು ಎಂದು ಹೇಳಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಆ ಹೇಳಿಕೆಗೆ ಉಲ್ಟಾ ಹೊಡೆದಿದ್ದಾರೆ. ಸ್ವಾಮೀಜಿಗಳ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ರಾಜ್ಯಾದ್ಯಾಂತ ಪಕಲ್ಷಾತೀತವಾಗಿ ತೀವ್ರ ಆಕ್ರೋಶ, ಟೀಕೆಗಳು , ಪಕ್ಷಾತೀತವಾಗಿ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಅವರು, ನನ್ನ ಹೇಳಿಕೆಯನ್ನು ತಿರುಚಲಾಗಿದೆ. ದುರದ್ದೇಶದಿಂದ ಹೇಳಿಕೆಯನ್ನು ತಿರುಚಿ, ಅಪಪ್ರಚಾರ ಮಾಡಲಾಗುತ್ತಿದೆ ಎಂದು ಟ್ವಿಟ್ವರ್ ಮೂಲಕ ಕಿಡಿಕಾರಿದ್ದಾರೆ.
ನಾನು ಯಾವ ಸ್ವಾಮೀಜಿಗಳಿಗೂ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ, ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ. ದೀರ್ಘ ಕಾಲದಿಂದ ಸ್ವಾಮೀಜಿಗಳೊಂದಿಗೆ ಉತ್ತಮ ಸಂಬAಧವನ್ನು ಹೊಂದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ವಿವಾದವನ್ನು ತಣ್ಣಗಾಗಿಸುವ ಪ್ರಯತ್ನ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss