August 28, 2026
Friday, August 28, 2026
spot_img

ಅಣ್ಣ-ತಂಗಿಯರ ಬಂಧವಷ್ಟೇ ಅಲ್ಲ; ಸಮಾಜದ ರಕ್ಷಕರಿಗೂ ರಾಖಿ: ಬೆಳಗಾವಿಯಲ್ಲಿ ಮಹಿಳಾ ಮೋರ್ಚಾದಿಂದ ವಿಶಿಷ್ಟ ರಕ್ಷಾಬಂಧನ

ಹೊಸದಿಗಂತ ವರದಿ ​ಬೆಳಗಾವಿ:

ರಕ್ಷಾ ಬಂಧನ ಕೇವಲ ಅಣ್ಣ-ತಂಗಿಯರ ಪ್ರೀತಿಯ ಹಬ್ಬವಲ್ಲ. ಸಮಾಜದ ರಕ್ಷಣೆ ಹಾಗೂ ಸುರಕ್ಷತೆಗಾಗಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ವೀರ ಯೋಧರು, ಪೊಲೀಸ್ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಗೆ ಗೌರವ ಸಲ್ಲಿಸುವ ಪವಿತ್ರ ದಿನವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

​ನಗರದ ಐತಿಹಾಸಿಕ ಕೋಟೆ ಆವರಣದಲ್ಲಿ ಶುಕ್ರವಾರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾಬಂಧನದ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಿಶೇಷ ರಕ್ಷಾಬಂಧನ

ಈ ವೇಳೆ ದೇಶದ ಗಡಿ ಕಾಯುವ ಸೇನಾ ಯೋಧರು, ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸ್ ಸಿಬ್ಬಂದಿ ಹಾಗೂ ನಗರದ ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರಿಗೆ ಮಹಿಳಾ ಮೋರ್ಚಾ ಪದಾಧಿಕಾರಿಗಳು ರಾಖಿ ಕಟ್ಟಿ, ಸಿಹಿ ಹಂಚಿ ಹಬ್ಬದ ಶುಭಾಶಯ ಕೋರಿದರು.

ಇದನ್ನೂ ಓದಿ:

​ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, “ಸಮಾಜದ ಸ್ವಾಸ್ಥ್ಯ ಮತ್ತು ಸುರಕ್ಷತೆಗಾಗಿ ಶ್ರಮಿಸುತ್ತಿರುವ ಯೋಧರು, ಪೊಲೀಸರು ಹಾಗೂ ಪೌರಕಾರ್ಮಿಕರ ಸೇವೆ ಮತ್ತು ತ್ಯಾಗ ಅಪಾರವಾಗಿದೆ. ಅವರ ಸೇವೆಯನ್ನು ಗುರುತಿಸಿ ರಕ್ಷಾ ಬಂಧನದ ಮೂಲಕ ಗೌರವ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ” ಎಂದರು.

ಈ ವೇಳೆ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿಲ್ಪಾ ಕೇಕರೇ, ಮುಖಂಡರಾದ ಶೀಲಾ ಗಡ್ಕರಿ, ಕವಿತಾ ಹಿರೇಮಠ, ಶಾಂತಾ ಸವದಿ, ಸೀಮಾ ಜೋಶಿ ಹಾಗೂ ಇಂದ್ರಾ ಬಾಳಿಕಾಯಿ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದು ಸಂಭ್ರಮ ಹಂಚಿಕೊಂಡರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !