ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್.ಎಸ್.ಎಸ್ ಮಾತ್ರವಲ್ಲ, ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ತೊಂದರೆ ಕೊಟ್ಟು ನಡೆಸುತ್ತಿರುವ ಎಲ್ಲಾ ಸಂಘಟನೆಗಳನ್ನು ನಿರ್ಬಂಧಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನಾಂಬ ದರುಶನಕ್ಕೆ ಆಗಮಿಸಿದ ಸಂಧರ್ಭ ಹಾಸನದ ಭುವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಂಘಟನೆ ನಿರ್ಬಂಧದ ಬಗ್ಗೆ ಈಗಾಗಲೇ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು, ಅದರ ಬಗ್ಗೆ ಮಾಹಿತಿ ಪಡೆದು ಅದರ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಜೆಡಿಎಸ್ ಶಾಸಕರಿಂದ ಬಂದಿರುವ ಅನುದಾನ ತಾರತಮ್ಯ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಮಾತನಾಡಿದ ಅವರು ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಕೋರ್ಟ್ ಹೇಳಿದ ತಕ್ಷಣ ಚುನಾವಣೆ ಹಂತ ಹಂತವಾಗಿ ನಡೆಸಲಾಗುವುದು ಎಂದು ಅವರು ಹೇಳಿದರು.
ಆರೆಸ್ಸೆಸ್ ಮಾತ್ರವಲ್ಲ, ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ನೀಡುವ ಎಲ್ಲಾ ಸಂಘಟನೆಗಳ ನಿರ್ಬಂಧಕ್ಕೆ ಚಿಂತನೆ: ಸಿಎಂ ಸಿದ್ದು
