ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಶ್‌ನ ಮುಂದಿನ ಸಿನಿಮಾ ಟಾಕ್ಸಿಕ್‌ನಲ್ಲಿ ಯಾರು ನಟಿಸ್ತಾರೆ ಅನ್ನೋ ಕುತೂಹಲ ಎಲ್ಲರಿಗೂ ಇದೆ. ಈಗಾಗಲೇ ಕರೀನಾ ಕಪೂರ್ ಖಾನ್ ಹಾಗೂ ನಯನತಾರಾ ಹೆಸರು ಬಂದು ಹೋಗಿದ್ದು, ಇದೀಗ ಮತ್ತೊಬ್ಬ ಸೂಪರ್ ಸ್ಟಾರ್ ನಟಿಯ ಹೆಸರು ಕೇಳಿಬರುತ್ತಿದೆ.
ಯಶ್ ಸಿನಿಮಾದಲ್ಲಿ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈಗಾಗಲೇ ಐಶ್ವರ್ಯಾ ಜೊತೆ ಮಾತುಕತೆ ಆಗಿದ್ದು, ಅವರು ಒಕೆ ಹೇಳಿದ್ದಾರೆ ಎನ್ನಲಾಗಿದೆ.
ಟಾಕ್ಸಿಕ್ ಸಿನಿಮಾಗಾಗಿ ಬೆಂಗಳೂರಿನಲ್ಲಿ ಈಗಾಗಲೇ ಬೃಹತ್ ಸೆಟ್ ಹಾಕಿದ್ದಾರೆ. ಇನ್ನೇನು ಸದ್ಯದಲ್ಲೇ ಶೂಟಿಂಗ್ ಕೂಡ ಶುರುವಾಗಲಿದೆ.