ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕರಿಗೆ ನಿಖಿಲ್ ಕುಮಾರಸ್ವಾಮಿ ಟಾರ್ಗೆಟ್ ಅಲ್ಲ, ನಾನು ಟಾರ್ಗೆಟ್ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು, ಉಪ ಚುನಾಣೆಯಲ್ಲಿ ನಿಖಿಲ್ ಸೋಲಿಸಲು ಕಾಂಗ್ರೆಸ್ ದೊಡ್ಡ ಕುತಂತ್ರ ರೂಪಿಸಿದೆ.
ಅದರಿಂದ ನನ್ನ ಮುಂದಿನ ಬೆಳವಣಿಗೆ ಕುಗ್ಗಿಸಬಹುದು ಎಂದು ಅವರು ಲೆಕ್ಕಾಚಾರ ಮಾಡಿದ್ದಾರೆ. ರಾಜಕೀಯವಾಗಿ ನನ್ನನ್ನು ಮುಗಿಸಬೇಕೆಂದು ಹೊರಟಿದ್ದಾರೆ. ನಾನು ಕೇಂದ್ರ ಮಂತ್ರಿಯಾಗಿರುವುದನ್ನು ಅವರು ಸಹಿಸುತ್ತಿಲ್ಲ. ಅವರಿಗೆ ನಿಖಿಲ್ ಗಿಂತ ನಾನೇ ದೊಡ್ಡ ಟಾರ್ಗೆಟ್ ಆಗಿದ್ದೇನೆ. ಅವರ ಯಾವುದೇ ಕುತಂತ್ರಗಳು ಚನ್ನಪಟ್ಟಣ ಜನತೆ ಮುಂದೆ ನಡೆಯಲ್ಲ ಎಂದು ಹೇಳಿದರು.
ಕಳೆದ ವಿಧಾನಸಭೆ ಚುನಾವಣೆ ಕಾಲದಿಂದಲೇ ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಷಡ್ಯಂತ್ರ ಮಾಡಿ 19 ಸ್ಥಾನಕ್ಕೆ ಜೆಡಿಎಸ್ ಇಳಿಸಿದರು. ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ ಎಂದು ಅಪಪ್ರಚಾರ ಮಾಡಿದರು. ಆದರೆ, ಯಾರೊಬ್ಬರನ್ನೂ ಅಲುಗಾಡಿಸಲು ಅವರಿಂದ ಆಗಲಿಲ್ಲ ಎಂದು ಕಿಡಿಕಾರಿದರು.