ಈ ಹಿಂದೆ ಮಹಿಳೆಯರಿಗೆ ಮಾತ್ರ ಲಭ್ಯವಿದ್ದ ಗೃಹಲಕ್ಷ್ಮಿ ಯೋಜನೆ ಇದೀಗ ತೃತೀಯಲಿಂಗಿಗಳೂ ಕೂಡ ಜಿಲ್ಲಾಧಿಕಾರಿ ನೀಡಿರುವ ಗುರುತಿನ ಚೀಟಿಯನ್ನು ತೋರಿಸಿ ಗೃಹಲಕ್ಷ್ಮಿ ಹಣಕ್ಕಾಗಿ ಅರ್ಜಿ ಸಲ್ಲಿಸಬಹುದು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯವು ಈಗಾಗಲೇ ತೃತೀಯ ಲಿಂಗಿಗಳಿಗೆ ಹಣವನ್ನು ಮೀಸಲಿಟ್ಟಿದೆ. ಅಪ್ಲಿಕೇಶನ್ ಪ್ರಕ್ರಿಯೆಯು ಅಭಿವೃದ್ಧಿ ಹಂತದಲ್ಲಿದೆ. ಈ ತಿಂಗಳ ಅಂತ್ಯದವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ನೀವು ಮೂರನೇ ಲಿಂಗಕ್ಕೆ ಸೇರಿದವರಾಗಿದ್ದರೆ, ಜಿಲ್ಲಾಧಿಕಾರಿಗಳು ನೀಡಿದ ಗುರುತಿನ ಚೀಟಿ ಹೊಂದಿದ್ದರೆ ನೀವು ಅರ್ಜಿ ಸಲ್ಲಿಸಬಹುದು. ಈ ತಿಂಗಳು ನಿಮ್ಮ ಅರ್ಜಿಯನ್ನು ಸಲ್ಲಿಸಿದರೆ, ಮುಂದಿನ ತಿಂಗಳು ನಿಮ್ಮ ಖಾತೆಗೆ 2,000 ರೂ. ಬರಲಿದೆ.
ರಾಜ್ಯದಲ್ಲಿ 40,000 ಕ್ಕೂ ಹೆಚ್ಚು ತೃತೀಯಲಿಂಗಿಗಳಿದ್ದು, ಅವರ ಅಭಿವೃದ್ಧಿ ಮತ್ತು ಜೀವನೋಪಾಯಕ್ಕೆ ಗೃಹಲಕ್ಷ್ಮಿ ನಿಧಿ ಸಹಾಯ ಮಾಡುತ್ತವೆ. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್‌ನಲ್ಲಿ ಅರ್ಜಿ ಸಲ್ಲಿಸಬಹುದು.
Sir this is the best support for helping poor people.